ಬೆಂಗಳೂರು : ಎಡಿಜಿಪಿ ಚಂದ್ರಶೇಖರ್ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಇದೀಗ ತಾರಕಕ್ಕೆ ಏರಿದ್ದು, ಎಚ್ ಡಿ ಕುಮಾರಸ್ವಾಮಿ ಬೆದರಿಸುವುದಾಗಿ ಹೇಳಿಕೆ ನೀಡಿದ್ದರಿಂದ ಈ ವಿಚಾರವಾಗಿ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಡಿಜಿಪಿ ಚಂದ್ರಶೇಖರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಹೌದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಅವರು FIR ದಾಖಲಿಸಿದ್ದಾರೆ.ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಇತರರು ತೊಂದರೆ ಕೊಡುವುದಾಗಿ ನಾನಾಗೆ ಬೆದರಿಕೆ ಹಾಕಿದ್ದಾರೆ ಎಂದು ಎಫ್ ಐ ಆರ್ ನಲ್ಲಿ ಎಡಿಜಿಪಿ ಚಂದ್ರಶೇಖರ್ ಉಲ್ಲೇಖಿಸಿದ್ದಾರೆ.
ಎಚ್ ಡಿ ಕುಮಾರಸ್ವಾಮಿ ಅವರು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಆದ್ದರಿಂದ A1 ಆರೋಪಿಯಾಗಿ HD ಕುಮಾರಸ್ವಾಮಿ, A2 ನಿಖಿಲ್, ಹಾಗೂ A3 ಆರೋಪಿ ಜೆಡಿಎಸ್ ಮುಖಂಡ ಸುರೇಶ್ ಬಾಬು ವಿರುದ್ಧ FIR ದಾಖಲಾಗಿದೆ. HD ಕುಮಾರಸ್ವಾಮಿ ಹಾಗೂ ಇತರರಿಂದ ಬೆದರಿಕೆ ಬಂದಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ FIR ದಾಖಲಾಗಿದೆ.