ಬೆಳಗಾವಿ : ತಹಶೀಲ್ದಾರ್ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಲಕ್ಷ್ಮಿ ಹೆಬ್ಬಾಳ್ಕರ್ ಅಪ್ತನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.
ರುದ್ರಣ್ಣ ಎಡವಣ್ಣವರ (35) ಮೃತ ದುರ್ದೈವಿ, ಬೆಳಗಾವಿಯ ರಿಸಾಲ್ದಾರ ಗಲ್ಲಿಯಲ್ಲಿಯುವ ತಹಶಿಲ್ದಾರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದರು.
ಸೋಮವಾರ ತಡರಾತ್ರಿ ಹತ್ತು ಗಂಟೆಗೆ ಕಚೇರಿಗೆ ಬಂದಿರುವ ನೌಕರ ಕೆಲಸ ಇದೆ ಎಂದು ಕಚೇರಿ ಒಳಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಆತ್ಮಹತ್ಯೆಗೂ ಮುನ್ನ ರುದ್ರಣ್ಣ ಕಚೇರಿಯ ವಾಟ್ಸ್ ಅಪ್ ಗ್ರೂಪ್ ನಲ್ಲಿ ಡೆತ್ ನೋಟ್ ವೊಂದನ್ನು ಬರೆದು ಹಾಕಿದ್ದು, ನನ್ನ ಸಾವಿಗೆ ತಹಶೀಲ್ದಾರ್ ಬಸವರಾಜ್ ಹಾಗೂ ಸೋಮು ಕಾರಣ, ನಮ್ಮ ಕಚೇರಿಯಲ್ಲಿ ಬಹಳ ಅನ್ಯಾಯವಾಗುತ್ತಿದೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಎಂದು ಬರೆದುಕೊಂಡಿದ್ದಾರೆ.
ವರ್ಗಾವಣೆ ವಿಚಾರಣೆಕ್ಕೆ ಸಂಬಂಧಪಟ್ಟಂತೆ ಕಿರುಕ್ಲ ಅನುಭವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆಪ್ತ ಸೋಮು ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ರುದ್ರಣ್ಣ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ