ಗದಗ : ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಹೊರವಲಯದ ಬಳಿ ಲಾರಿ ಹಾಗೂ ಕಾರಿನ ನಡುವೆ ಬೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ-ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಸಿದ್ದರಾಮ ದಂಪತಿ ಹಾಗೂ ಮಕ್ಕಳು ಕುಕ್ಕೆ ಸುಬ್ರಮಣ್ಯ ದೇವಸ್ಥಾನದಿಂದ ವಾಪಸ್ ಬರುವ ವೇಳೆ ಹುಬ್ಬಳ್ಳಿ-ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿಯ ಭೈರನಹಟ್ಟಿ ಗ್ರಾಮದ ಹೊರವಲಯದ ಬಳಿ ಲಾರಿ ಡಿಕ್ಕಿಯಾದ ಪರಿಣಾಮ ಕಾರಿನ ಮುಂಬಾಗದಲ್ಲಿದ್ದ ದಂಪತಿಗಳು ಸಾವನ್ನಪ್ಪಿದ್ದಾರೆ.
ಮೃತರನ್ನು ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ಎಂದು ಗುರುತಿಸಲಾಗಿದ್ದು, ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಂಭೀರ ಗಾಯಗಳಾಗಿದ್ದು, ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಈ ಘಟನೆಯ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.