ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ವಿಚಾರಣೆಗಾಗಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಈ ಕುರಿತು ಮಾತನಾಡಿದ್ದು, ಸಿಎಂ ಏಕೆ ರಾಜೀನಾಮೆ ನೀಡಬೇಕು? ರಾಜ್ಯ ಬಿಜೆಪಿ ಅಧ್ಯಕ್ಷರ ವಿರುದ್ಧ ಇಡಿ ಕೇಸ್ ಇದೆ, ಇಸಿಆರ್ ದಾಖಲಿಸಲಾಗಿದೆ, ಅವರು ರಾಜೀನಾಮೆ ನೀಡಿದ್ದಾರೆಯೇ?
ಇದು ಅತ್ಯಂತ ಗಂಭೀರ ಅಪರಾಧವಾಗಿದೆ. ಇದು ರಾಜಕೀಯ ಪ್ರೇರಿತವಾಗಿದೆ, ಎಲ್ಲರಿಗೂ ತಿಳಿದಿದೆ.ಇದು ರಾಜಕೀಯ ಪ್ರೇರಿತ, ತಾನು ಕಾನೂನು ಪಾಲಿಸುವ ಪ್ರಜೆ ಮತ್ತು ಸಾಂವಿಧಾನಿಕ ಸಂಸ್ಥೆಗಳು ಏನು ಕೇಳುತ್ತದೋ ಅದನ್ನು ಮಾಡುತ್ತೇನೆ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.
ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿರುವ ಸಿಎಂ ಸಿದ್ದರಾಮಯ್ಯ. ಈ ಮೂಲಕ 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.