Ad imageAd image

ಪತ್ನಿ ಮಗನನ್ನು ಕೊಂದು ನಂತರ ರೈಲಿಗೆ ತಲೆ ಕೊಟ್ಟು ಪತಿ ಆತ್ಮಹತ್ಯೆ

Bharath Vaibhav
ಪತ್ನಿ ಮಗನನ್ನು ಕೊಂದು ನಂತರ ರೈಲಿಗೆ ತಲೆ ಕೊಟ್ಟು ಪತಿ ಆತ್ಮಹತ್ಯೆ
WhatsApp Group Join Now
Telegram Group Join Now

ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಪತ್ನಿ ಹಾಗೂ ನಾಲ್ಕು ವರ್ಷದ ಮಗನನ್ನು ಕೊಂದು ವ್ಯಕ್ತಿ ಒಬ್ಬ ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ.

ಪತ್ನಿ ಮಗನನ್ನು ಕೊಂದು ನಂತರ ರೈಲಿಗೆ ತಲೆ ಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಎಂಬಲ್ಲಿ ಒಂದು ಘಟನೆ ನಡೆದಿದೆ.

ಫ್ಲಾಟ್ ನಲ್ಲಿ ಪತ್ನಿ ಪ್ರಿಯಾಂಕ (28) ಪುತ್ರ ಹೃದಯ್ (4) ಭೀಕರವಾಗಿ ಕೊಲೆ ಮಾಡಿದ್ದಾನೆ.ನಂತರ ರೈಲಿಗೆ ತಲೆ ಕೊಟ್ಟು ಕಾರ್ತಿಕ್ ಭಟ್ (32) ಆತ್ಮಹತ್ಯೆಗೆ ಶರಣಾಗಿದ್ದಾನೆ.

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹೊರ ವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆಯೇ ಪತ್ನಿ ಮಗನನ್ನು ಕೊಂದು ನಂತರ ಕಾರ್ತಿಕ್ ಭಟ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆ ಪ್ರಕರಣದ ತನಿಖೆ ವೇಳೆ ಕಾರ್ತಿಕ್ ಭಟ್ ಎಂಬುವುದು ಪತ್ತೆಯಾಗಿದೆ. ಕಾರ್ತಿಕ್ ಫ್ಲ್ಯಾಟ್ ಬಳಿಗೆ ಪೊಲೀಸರು ಬಂದಾಗ ಪತ್ನಿ ಹಾಗೂ ಪುತ್ರನ ಶವ ಕೂಡ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!