ಬೆಳಗಾವಿ ಗ್ರಾಮ ಲೆಕ್ಕಾಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Bharath Vaibhav
ಬೆಳಗಾವಿ ಗ್ರಾಮ ಲೆಕ್ಕಾಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
WhatsApp Group Join Now
Telegram Group Join Now

ಬೆಳಗಾವಿ: ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಗ್ರಾಮ ಲೆಕ್ಕಾಧಿಕಾರಿ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಡವಳೇಶ್ವರ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆ ವಿಠ್ಠಲ ಡವಳೇಶ್ವರ ಚಿಕ್ಕೋಡಿಯಿಂದ ಬಾಗಲಕೋಟೆಗೆ 1.10 ಕೋಟಿ ಹಣ ಅಕ್ರಮವಾಗಿ ಸಾಗಿಸುವಾಗ ಸಿಕ್ಕಿಬಿದ್ದಿದ್ದರು. ಈ ವೇಳೆ ಅವರ ನಿಪ್ಪಾಣಿ ಪಟ್ಟಣದ ಬಾಡಿಗೆ ಮನೆಯಲ್ಲಿಯೂ ಅಪಾರ ಪ್ರಮಾಣದಲ್ಲಿ ಹಣ ಪತ್ತೆಯಾಗಿತ್ತು.

ವಿಠ್ಠಲ ಡವಳೇಶ್ವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಇದೀಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!