ಬೆಂಗಳೂರು: ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನ ನಡೆಯುತ್ತಿದ್ದು ೫೦ ಶಾಸಕರಿಗೆ ತಲಾ ೫೦ಕೋಟಿ ಆಮಿಷವೊಡ್ಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಆರೋಪ ಮಾಡಿದ್ದಾರೆ.
ಉಪಚುನಾವಣೆಯ ಮತದಾನ ಮುಕ್ತಾಯವಾದ ಬೆನ್ನಲ್ಲೇ ಇಂತಹದ್ದೊಂದು ಸ್ಫೋಟಕ ಹೇಳಿಕೆ ನೀಡಿರುವ ಸಿ ಎಂ ಸಿದ್ದರಾಮಯ್ಯ, ಹಿಂದುಳಿದ ವರ್ಗದವ ನೊಬ್ಬ ಮುಖ್ಯ ಮಂತ್ರಿ ಆಗಿರುವುದು ಕೆಲವರಿಗೆ ಸಹಿಸಲು ಆಗುತ್ತಿಲ್ಲ, ಹೀಗಾಗಿ ಆಪರೇಷನ್ ಮೂಲಕ ನಮ್ಮ ಸರ್ಕಾರ ಅಸ್ಥಿರ ಗೊಳಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ನನ್ನನ್ನು ಮುಟ್ಟಿದರೆ ಕರ್ನಾಟಕದ ಜನತೆ ಸುಮ್ಮನೆ ಬಿಡುವುದಿಲ್ಲ. ನಾನು ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆಯಿಲ್ಲದೆ ರಾಜಕಾರಣ ಮಾಡಿದ್ದೇನೆ.
ಈಗ ನನಗೆ ಕಳಂಕ ಹತ್ತಿಸುವ ಪ್ರಯತ್ನ ನಡೆಯುತ್ತಿದೆ. ಇದರ ಜತೆಗೆ ಶಾಸಕರನ್ನು ಸೆಳೆದು ಸರ್ಕಾರ ಪತನ ಗೊಳಿಸುವ ಹುನ್ನಾರ ನಡೆಯುತ್ತಿದೆ ಎಂದಿದ್ದಾರೆ.
ವರದಿ: ಅಯ್ಯಣ್ಣ ಮಾಸ್ಟರ್