Ad imageAd image

ಮದುವೆಯಾಗುವಂತೆ ಸೋದರ ಮಾವ ಕಿರುಕುಳ :ಅಪ್ರಾಪ್ತೆ ಆತ್ಮಹತ್ಯೆ 

Bharath Vaibhav
ಮದುವೆಯಾಗುವಂತೆ ಸೋದರ ಮಾವ ಕಿರುಕುಳ :ಅಪ್ರಾಪ್ತೆ ಆತ್ಮಹತ್ಯೆ 
WhatsApp Group Join Now
Telegram Group Join Now

ಬೆಂಗಳೂರು: ಮದುವೆಯಾಗುವಂತೆ ಸೋದರ ಮಾವನಿಂದ ಕಿರುಕುಳ ಹಿನ್ನೆಲೆಯಲ್ಲಿ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶೆಟ್ಟಿಹಳ್ಳಿಯಲ್ಲಿ ನಡೆದಿದೆ.

ತಮ್ಮ ನಿವಾಸದಲ್ಲಿ 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನವೆಂಬರ್ 11 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಸೋದರ ಮಾವನ ವಿರುದ್ಧ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

28 ವರ್ಷದ ಸೋದರ ಮಾವನನ್ನು ಬಾಗಲಗುಂಟೆ ಟಾಣೆ ಪೋಲೀಸರು ಬಂಧಿಸಿದ್ದಾರೆ. ಮದುವೆಯಾಗುವಂತೆ ಪೀಡಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಬಂಧಿಸಲಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿ, ಹಲ್ಲೆ ನಡೆಸಿದ್ದಾನೆ ಎಂದು ಬಾಲಕಿ ತಾಯಿ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆ, ಬಿಎನ್‌ಎಸ್ ಕಾಯ್ದೆಯಡಿ ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!