ನಂದವಾಡಗಿ :-ಬಾಗಲಕೋಟೆ ಜಿಲ್ಲೆಯ ಹುನಗುಂದ/ಇಲಕಲ್ ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಭಾರತ ದೇಶದ ಮಾಜಿ ಪ್ರಧಾನಿಗಳು, ಸ್ವಾತಂತ್ರ್ಯ ಹೋರಾಟಗಾರರು, ನೇತಾರರು ಪಂಡಿತ ಜವಾಹರಲಾಲ್ ನೆಹರುರವರ ಜನ್ಮದಿನದ ಪ್ರಯುಕ್ತ ಮಕ್ಕಳ ದಿನಾಚರಣೆಯ ಕಾರ್ಯಕ್ರಮವನ್ನು ಅದ್ದೂರಿ, ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಈ ದಿನದ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಶಾಲೆಯ ಮುಖ್ಯ ಗುರುಮಾತೆಯರು ಶ್ರೀಮತಿ ವಿ ಬಿ ಕುಂಬಾರ ರವರು ಪಂಡಿತ್ ಜವಾಹರಲಾಲ್ ನೆಹರುರವರ ವ್ಯಕ್ತಿತ್ವ ಹಾಗೂ ಸಾಧನೆಯ ಬಗ್ಗೆ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಮಕ್ಕಳೆ ಅತಿಥಿಗಳ ಸ್ಥಾನವನ್ನು ಅಲಂಕರಿಸಿದ್ದು ವೇದಿಕೆಯು ಗಮನ ಸೆಳೆಯಿತು.ಮಕ್ಕಳ ದಿನಾಚರಣೆ ಪ್ರಯುಕ್ತವಾಗಿ ಶಾಲೆಯಲ್ಲಿ ವಿವಿಧ ಸ್ಪರ್ಧೆಗಳನ್ನು ಒಂದರಿಂದ ಏಳನೇ ತರಗತಿ ವಿದ್ಯಾರ್ಥಿನಿಯರಿಗೆ ಹಮ್ಮಿಕೊಳ್ಳಲಾಗಿತ್ತು.
ಪ್ರಬಂಧ, ಭಾಷಣ, ಸಹಪಠ್ಯ/ ಪಠ್ಯ ಚಟುವಟಿಕೆಗಳು, ಮನರಂಜನ ಆಟಗಳು, ನಾಟಕ, ಪಾತ್ರಾಭಿನಯ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮಕ್ಕಳ ದಿನಾಚರಣೆ ಶಾಲೆಯಲ್ಲಿ ಮಕ್ಕಳ ಗೋಷ್ಠಿ ಎಂಬ ವಿಶೇಷ ಹಾಗೂ ವಿನೂತನವಾಗಿ ಆಯೋಜನೆ ಮಾಡಲಾಗಿತ್ತು. ಮಕ್ಕಳೇ ಕವನಗಳನ್ನು ಬರೆದು ವಾಚನ ಮಾಡಿದ್ದು ವಿಶೇಷವಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಶಾಲಾ ವತಿಯಿಂದ ಬಹುಮಾನ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವರದಿ:-ದಾವಲಸಾಬ