Ad imageAd image

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ : ಬೆಳಗಾವಿಯಲ್ಲಿ ಮತ್ತೊಂದು ಹೀನ ಕೃತ್ಯ 

Bharath Vaibhav
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ : ಬೆಳಗಾವಿಯಲ್ಲಿ ಮತ್ತೊಂದು ಹೀನ ಕೃತ್ಯ 
CRIME
WhatsApp Group Join Now
Telegram Group Join Now

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಸಾರ್ವಜನಿಕವಾಗಿ ಮಹಿಳೆಯ ಬಟ್ಟೆಯನ್ನು ಹರಿದು ಹಾಕಿ ಹಲ್ಲೆ ನಡೆಸಲಾಗಿದೆ.

ಬೆಳಗಾವಿಯ ವಡ್ಡರವಾಡಿಯಲ್ಲಿ ಅಮಾನವೀಯ ಘಟನೆ ನಡೆದಿದೆ. ಮಗಳು ವೇಶ್ಯಾವಾಟಿಕೆ ಮಾಡುತ್ತಿದ್ದಾಳೆ ಎಂದು ಆರೋಪಿಸಿ ತಾಯಿ, ಮಗಳ ಮೇಲೆ ಹಲ್ಲೆ ಮಾಡಿ ಅಟ್ಟಹಾಸ ನಡೆಸಲಾಗಿದೆ.

ಬಾಲಕಿಯ ಜೊತೆ ನಾಲ್ಕು ವರ್ಷದಿಂದ ಮೂವರು ವಾಸವಾಗಿದ್ದರು. ಪಕ್ಕದ ಮನೆಯ ಅಷ್ಟೇಕರ್ ಕುಟುಂಬದಿಂದ ಹಲ್ಲೆ ಮಾಡಲಾಗಿದೆ. ಸಂಬಂಧ ಇಲ್ಲದವರೆಲ್ಲ ಮನೆಗೆ ಬಂದು ಹೋಗುತ್ತಾರೆ. ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದೀರಿ ಎಂದು ಹಲ್ಲೆ ನಡೆಸಲಾಗಿದೆ.

ತಾಯಿ, ಮಗಳನ್ನು ಮನೆ ಬಿಡಿಸಲು ಜಗಳ ತೆಗೆದು ಹಲ್ಲೆ ಮಾಡಲಾಗಿದೆ ಎನ್ನಲಾಗಿದ್ದು, ತಮಗೆ ಜೀವ ಭಯ ಇದೆ ರಕ್ಷಣೆ ಕೊಡಿ ಎಂದು ಸಂತ್ರಸ್ತರು ಮನವಿ ಮಾಡಿದ್ದಾರೆ.

ಹಲ್ಲೆಯ ಬಳಿಕ ನ್ಯಾಯಕ್ಕಾಗಿ ಎರಡು ದಿನ ಠಾಣೆಗೆ ಅಲೆದಾಡಿದರೂ ಸ್ಪಂದನೆ ದೊರೆತಿಲ್ಲ. ಬೆಳಗಾವಿ ಕಮಿಷನರ್ ಗೆ ದೂರು ನೀಡಿದ ಬಳಿಕ ನಿನ್ನೆ ರಾತ್ರಿ ಮೂವರ ವಿರುದ್ಧ ಮಾಳಮಾರುತಿ ಠಾಣೆಯಲ್ಲಿ ಕೇಸು ದಾಖಲಾಗಿದೆ ಎನ್ನಲಾಗಿದೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!