ಬೆಂಗಳೂರು : ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಕಾನೂನು ಕ್ರಮ ಜರುಗಿಸುವ ಬಗ್ಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಯ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಲ್ಲಿ ಮಾತಾಡಿದ ಸಿಎಂ ಸಿದ್ದರಾಮಯ್ಯ, ದೇಶದೆಲ್ಲೆಡೆ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಮಹಾರಾಷ್ಟ್ರ ಸರ್ಕಾರದ ವಿರುದ್ದ ದಾವೆ ಹೂಡುತ್ತೇವೆ.
ಈ ಸಂಬಂಧ ಕಾನೂನು ತಜ್ಞರ ಜೊತೆ ಚರ್ಚೆ ಮಾಡಲಾಗ್ತಿದೆ. ಮೋದಿ , ಬಿಜೆಪಿ ನಾಯಕರು ಸುಳ್ಳು ಪ್ರಚಾರ ಮಾಡ್ತಿದ್ದಾರೆ ಎಂದು ಬಿಜೆಪಿ ನಾಯಕರ ಸಿಎಂ ಕೆಂಡಕಾರಿದರು.
ಕೇಂದ್ರಕ್ಕೆ ನಾಲ್ಕುವರೆ ಲಕ್ಷ ಕೋಟಿ ತೆರಿಗೆ ಕಟ್ಟುತ್ತೇವೆ. ನಮಗೆ ವಾಪಸ್ಸು ಬರೋದು 60 ಸಾವಿರ ಕೋಟಿ ಅಷ್ಟೆ. ಉಳಿದ ದುಡ್ಡನ್ನ ದೇವೇಗೌಡ್ರಾಗಲಿ ಕುಮಾರಸ್ವಾಮಿ ಆಗಲಿ ಕೊಡಿಸಲಿ.. ಇವರು ಕರ್ನಾಟಕಕ್ಕೆ ಅನ್ಯಾಯ ಆಗಿದೆ ಅಂತ ಮಾತಾಡಿದ್ದಾರಾ..? ಬರೀ ಮಾತಾಡಿದ್ರೆ ಪ್ರಯೋಜನವಿಲ್ಲ ಎಂದು ಜೆಡಿಎಸ್ ನಾಯಕರ ವಿರುದ್ಧವೂ ಸಿಎಂ ಟೀಕೆ ಮಾಡಿದರು.