Ad imageAd image

ಬಡವರ ಬಿಪಿಎಲ್ ಕಾರ್ಡ್ ರದ್ದು ಆಗುವುದಿಲ್ಲ : ಡಿ. ಕೆ ಶಿವಕುಮಾರ್ 

Bharath Vaibhav
ಬಡವರ ಬಿಪಿಎಲ್ ಕಾರ್ಡ್ ರದ್ದು ಆಗುವುದಿಲ್ಲ : ಡಿ. ಕೆ ಶಿವಕುಮಾರ್ 
DKS
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ಧತಿ ವಿಚಾರ ದೊಡ್ಡ ಮಟ್ಟದ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದ ಮುಂದೆ ಸುದ್ದಿಗಾರರ ಜತೆ ಡಿಸಿಎಂ ಡಿಕೆಶಿ ಮಾತನಾಡಿದರು.ಬಿಪಿಎಲ್ ಕಾರ್ಡ್ ಬಗ್ಗೆ ಯಾವುದೇ ಗೊಂದಲ ಇಲ್ಲ. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆ ತಲುಪಿಸುವ ಸಲುವಾಗಿ ಕ್ರಮ ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಕ್ರಮ ಜರುಗಿಸಲಾಗಿದೆ ಎಂದರು. ಅರ್ಹವಾಗಿರೋ ಬಿಪಿಎಲ್ ಕಾರ್ಡ್ ರದ್ದು ಮಾಡಿಲ್ಲ. ಕೆಲವರು ಆರ್ಥಿಕವಾಗಿ ಸದೃಢರಾಗಿದ್ದರೂ ಬಿಪಿಎಲ್ ಕಾರ್ಡ್ ಹೊಂದಿದ್ದರು. ಅಂತವರ ಕಾರ್ಡ್ ಗಳನ್ನ ರದ್ದು ಮಾಡಲಾಗಿದೆ. ಯಾರಿಗೂ ಅನ್ಯಾಯವಾಗಿಲ್ಲ ಎಂದು ತಿಳಿಸಿದರು.

ಈಗಾಗಲೇ ಸ್ಥಳೀಯ ಶಾಸಕರಿಗೆ ಮಾಹಿತಿ ನೀಡಲಾಗಿದೆ ಹಾಗೆಯೇ ಗ್ಯಾರಂಟಿ ಯೋಜನೆ ಜಾರಿ ಪ್ರತಿನಿಧಿಗಳನ್ನ ಸಂಪರ್ಕ ಮಾಡಲಾಗಿದೆ. ಪ್ರತಿಯೊಬ್ಬರ ಮನೆಗೂ ತೆರಳಿ ಪರಿಶೀಲಿಸಿ, ಬಿಪಿಎಲ್ ಕಾರ್ಡ್ ಗೊಂದಲ ಸರಿಪಡಿಸುವಂತೆ ಹಾಗೂ ಹೊಸ ಅರ್ಜಿ ಬಗ್ಗೆ ನಿಗಾವಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದೆ. ಬಡವರಿಗೆ ಅನ್ಯಾಯ ಆಗೋಕೆ ಬಿಡೋದಿಲ್ಲ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಬಗ್ಗೆ ಇರುವ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳೋದರ ಬಗ್ಗೆ ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ನಡೆಸಿರೋದಾಗಿ ಡಿಸಿಎಂ ಡಿಕೆಶಿ ಸ್ಪಷ್ಟಪಡಿಸಿದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!