ಗದಗ : ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದಲ್ಲಿ ನಡೆದಿದೆ.
ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಚಂದ್ರು ಲಮಾಣಿ ಅವರಿಗೆ ಸೇರಿದ ಮನೆಯೊಂದರಲ್ಲಿ ಕಾರು ಚಾಲಕ ಸುನೀಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕೌಟುಂಬಿಕ ಕಲಹದ ಹಿನ್ನೆಲೆ ಸುನೀಲ್ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನೆ ಕುರಿತಂತೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.