Ad imageAd image

ಭಾರತೀಯ ಜನತಾ ಪಾರ್ಟಿ ವತಿಯಿಂದ ಇದೇ ನವಂಬರ್ 22 ಶುಕ್ರವಾರ ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ

Bharath Vaibhav
ಭಾರತೀಯ ಜನತಾ ಪಾರ್ಟಿ ವತಿಯಿಂದ ಇದೇ ನವಂಬರ್ 22 ಶುಕ್ರವಾರ ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ
WhatsApp Group Join Now
Telegram Group Join Now

ಬೆಳಗಾವಿ :-  ಇದೇ ವೇಳೆ ನಮ್ಮ ಭೂಮಿ – ನಮ್ಮ ಹಕ್ಕು ಶೀರ್ಷಿಕೆಯಡಿ ಜನ ಜಾಗೃತಿ ಆಂದೋಲನ ಕುರಿತು ಭಿತ್ತಿ ಪತ್ರ ಬಿಡುಗಡೆ ಮಾಡಲಾಯಿತು.ಪತ್ರಿಕಾಗೋಷ್ಠಿ ಉದ್ದೇಶಿಸಿ ಭಾ.ಜ.ಪಾ ಮುಖಂಡರಾದ ಎಂ.ಬಿ.ಜಿರಲಿ ಮಾತನಾಡಿ ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಇದೇ 22 ಶುಕ್ರವಾರ ರಂದು ಜಿಲ್ಲಾಧಿಕಾರಿಗಳ  ಕಚೇರಿ (ಡಿ.ಸಿ. ಕಚೇರಿ) ಮುಂದೆ ಹೋರಾಟ  ನಡೆಸಲಾಗುವುದು. ಅಲ್ಲದೇ, ಅಹವಾಲು ಸ್ವೀಕಾರ ಮಾಡಲಾಗುವುದು.

* ಶೋಷಣೆಗೆ ಒಳಗಾದ ಸಹಸ್ರಾರು ಸಂಖ್ಯೆಯ
ಸಾರ್ವಜನಿಕರು, ರೈತರು,
ಮಠಮಂದಿರಗಳು, ಶಾಲೆಗಳು ಹಾಗೂ ಸಾರ್ವಜನಿಕ ಆಸ್ತಿಗಳ ಕುರಿತು
ಬೆಳಿಗ್ಗೆಯಿಂದ ಸಂಜೆ ತನಕ ವೇದಿಕೆಗೆ ಬರಮಾಡಿಕೊಂಡು ಅಹವಾಲು
ಸ್ವೀಕರಿಸುತ್ತೇವೆ. ಸಮಸ್ಯೆಯ ಗಂಭೀರತೆಯನ್ನು ಪರಾಮರ್ಶೆ
ಮಾಡುತ್ತೇವೆ.


* 3 ತಂಡಗಳನ್ನು ರಾಜ್ಯಾಧ್ಯಕ್ಷರು ಈಗಾಗಲೇ
ಪ್ರಕಟಿಸಿದ್ದಾರೆ. ರಾಜ್ಯಾಧ್ಯಕ್ಷರಾದ
ವಿಜಯೇಂದ್ರ ಅವರ ನೇತೃತ್ವದ ಒಂದು ತಂಡ, ವಿಪಕ್ಷ ನಾಯಕರಾದ
ಆರ್.ಅಶೋಕ್, ವಿಧಾನಪರಿಷತ್‌ ವಿಪಕ್ಷ ನಾಯಕರಾದ ಛಲವಾದಿ
ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ತಂಡಗಳು ಕಾರ್ಯನಿರ್ವಹಿಸುತ್ತವೆ.

ಈ  ಮೂರು ತಂಡಗಳು ಡಿಸೆಂಬರ್ ಮೊದಲ ವಾರದಿಂದ ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ,ಪ್ರವಾಸ ಮಾಡಲಿದೆ. ರೈತರು, ಮಠಮಾನ್ಯಗಳು ಮತ್ತು ಸಾರ್ವಜನಿಕರ  ಸಮಸ್ಯೆಯನ್ನು ಆಲಿಸಲಿದೆ. ಅವರ ಸಮಸ್ಯೆಯನ್ನು ಮುಂಬರುವ ಬೆಳಗಾವಿ  ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ ಹಾಗೂ ನೈಜ ವರದಿಯನ್ನು ಸದನದಲ್ಲಿ  ಚರ್ಚಿಸುತ್ತೇವೆ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ
ನಡೆಸಲಾಗುವುದು ಎಂದು ಹೇಳಿದರು.

ಭಾ.ಜ.ಪಾ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ
ವಕ್ಫ್ ಆಸ್ತಿ ಸಂಬಂಧ ಇಡೀ ರಾಜ್ಯದಲ್ಲಿ ಸಮಸ್ಯೆ ಎದುರಾಗಿದೆ. ಆ ಸಮಸ್ಯೆಗೆ
ತಾರ್ಕಿಕ ಅಂತ್ಯ ಹುಡುಕುವ ನಿಟ್ಟಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರ  ನೇತೃತ್ವದಲ್ಲಿ ಕಳೆದ ಹತ್ತಾರು ದಿನಗಳಿಂದ ಪಕ್ಷದೊಳಗೆ ಆಂತರಿಕ ಚರ್ಚೆ ನಡೆಸಿ  ವ್ಯವಸ್ಥಿತವಾಗಿ ಜನರನ್ನು ಸಂಪರ್ಕಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರತಿ
ಜಿಲ್ಲೆಯಲ್ಲೂ 5 ಜನರ ತಂಡ ರಚಿಸಲಾಗಿದ್ದು ಆ ಪ್ರತಿ ತಂಡದಲ್ಲಿ ವಕೀಲರು, ರೈತ  ಮುಖಂಡರು ಇರುತ್ತಾರೆ.

ಕಾನೂನಾತ್ಮಕ ಹೋರಾಟಕ್ಕೆ ಶಕ್ತಿ ತುಂಬುವ ಸಲುವಾಗಿ ಈ ತಂಡ ರಚಿಸಲಾಗಿದೆ. ‘ನಮ್ಮ ಭೂಮಿ- ನಮ್ಮ ಹಕ್ಕು ಶೀರ್ಷಿಕೆಯ ಅಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಮಠಾಧೀಶರೂ ಸೇರಿದಂತೆ ಜಿಲ್ಲೆಯ ಪ್ರಮುಖ ವ್ಯಕ್ತಿಗಳನ್ನು ಒಳಗೊಂಡಂತೆ  ಎಲ್ಲರನ್ನೂ ಭೇಟಿ ಮಾಡುವುದರ ಮೂಲಕ ಜನಜಾಗೃತಿ ಮೂಡಿಸುತ್ತಿದ್ದೇವೆ.  ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ನಾವು ಕಾರ್ಯಕ್ರಮವನ್ನು ರೂಪಿಸಿದ್ದೇವೆ.  ಪ್ರತಿಯೊಬ್ಬ ರೈತರು ಹಾಗೂ ಸಾರ್ವಜನಿಕರಲ್ಲಿ ವಿನಂತಿ ಮಾಡುವುದೆನೆಂದರೆ ತಾವುಗಳು
ತಪ್ಪದೇ ತಮ್ಮ ಜಾಗದ ಪಹಣಿಯನ್ನು ಪರೀಕ್ಷಿಸಿಕೊಳ್ಳಬೇಕು.

* ನೋಟಿಸ್ ಹಿಂಪಡೆಯುವಂತೆ ಮುಖ್ಯಮಂತ್ರಿಗಳು ಹೇಳಿದ್ದು ಕೇವಲ ಮಹಾರಾಷ್ಟ್ರ  ಮತ್ತು ಜಾರ್ಖಂಡ್ ಚುನಾವಣೆಯ ಕಣ್ಣೆರೆಸುವ ತಂತ್ರವೇ? ರೈತರ ಕುರಿತು  ಕಾಂಗ್ರೆಸ್ಸಿನದು ಮೊಸಳೆ ಕಣ್ಣೀರಲ್ಲವೇ? 1974ರ ವಕ್ಫ್ ಆಸ್ತಿ ಕುರಿತ ಗಜೆಟ್ ಅನ್ನು  ಹಿಂಪಡೆಯಲು ರಾಜ್ಯದ ಕಾಂಗ್ರೆಸ್ ಸರಕಾರ ಬದ್ಧತೆಯನ್ನು ಪ್ರದರ್ಶಿಸುವುದೇ?  ಉತ್ತರಿಸಿ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದರು ಈ ಸಂದರ್ಭದಲ್ಲಿ ಭಾ.ಜ.ಪಾ ರಾಜ್ಯ ಉಪಾಧ್ಯಕ್ಷರಾದ ಅನಿಲ್ ಬೆನಕೆ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ರಾಜ್ಯ ಮಾಧ್ಯಮ ಸಮಿತಿ ಸದಸ್ಯ ಎಫ್.ಎಸ್.ಸಿಧ್ಧನಗೌಡ್ರ, ರಾಜ್ಯ ಸಾಮಾಜಿಕ ಜಾಲತಾಣ ಸದಸ್ಯ ನಿತಿನ್ ಚೌಗಲೆ, ಪ್ರಧಾನ ಕಾರ್ಯದರ್ಶಿ ಈರಯ್ಯ ಖೋತ, ರಾಜಶೇಖರ ಡೋಣಿ, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಹನುಮಂತ ಕೊಂಗಾಲಿ, ಮುರುಗೇಂದ್ರಗೌಡ ಪಾಟೀಲ, ಮನೋಜ್ ಪಾಟೀಲ್, ಬಸವರಾಜ್ ಪಾಟೀಲ್ ಹಾಗೂ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!