ಬೆಂಗಳೂರು : ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ್ದು, ಗೌರವಧನ 10,000 ಕ್ಕೆ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದೆ.
ಕಳೆದ 5 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ನಿರಂತರ ಹೋರಾಟ ನಡೆಸುತ್ತಿದ್ದರು. 15,000 ಮಾಸಿಕ ವೇತನ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳು ಈಡೇರಿಕೆಗೆ ಒತ್ತಾಯಿಸಿ ಹೋರಾಟ ಕೈಗೊಂಡಿದ್ದು, ಇಂದು ಸಿಎಂ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ.
ಆಶಾ ಕಾರ್ಯಕರ್ತೆಯರೊಂದಿಗೆ ನಮ್ಮ ಸಂಧಾನಸಭೆ ಯಶಸ್ವಿಯಾಗಿದೆ. ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರ ಕ್ರಮ ವಹಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಆಶಾ ಕಾರ್ಯಕರ್ತೆಯರು ಮುಷ್ಕರ ಹಿಂಪಡೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಆಶಾ ಕಾರ್ಯಕರ್ತೆಯರ ಜೊತೆಗೆ ಮಾತನಾಡಿದ್ದೇನೆ. ಅವರಿಗೆ 8 ಸಾವಿರ ರೂ. ಸಂಬಳ ಇದೆ. ಪ್ರತಿ ತಿಂಗಳು 10 ಸಾವಿರ ರೂಪಾಯಿ ಬರುವಂತೆ ಮಾಡುತ್ತೇವೆ. ಇನ್ಸೆಂಟಿವ್ ಸೇರಿ 10 ಸಾವಿರ ರೂಪಾಯಿ ಬರುವಂತೆ ಮಾಡುತ್ತೇವೆ ಎಂದು ಸಿಎಂ ಹೇಳದ್ದಾರೆ.