ಮೈಸೂರು : ಮೈಸೂರಿನ ಕೆಆರ್ಎಸ್ ತೆರಳುವ ರಸ್ತೆಗೆ ಪ್ರಿನ್ಸಸ್ ರಸ್ತೆ ಎಂಬುದಕ್ಕೆ ಯಾವುದೇ ದಾಖಲೆ ಇಲ್ಲ ಇದಕ್ಕೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವ ವಿಚಾರವಾಗಿ, ನಾನು ಯಾರಿಗೂ ರಸ್ತೆಗೆ ನನ್ನ ಹೆಸರಿಡಿ ಎಂದು ಹೇಳಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು 40 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಯಾರಿಗೂ ನನ್ನ ಹೆಸರಡಿ ಎಂದು ಹೇಳಿಲ್ಲ. ಮೈಸೂರು ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಾಗಲೇ ನಾನು ಬೇಡ ಅಂದೇ. ಡಾಕ್ಟರೇಟ್ ತೆಗೆದುಕೊಳ್ಳುವಷ್ಟು ನನಗೆ ಯೋಗ್ಯತೆ ಇಲ್ಲ.
ಆ ರಸ್ತೆಗೆ ಬೇರೆ ಹೆಸರಿದ್ದರೆ ಬದಲಾವಣೆ ಮಾಡುವುದು ಬೇಡ. ಹೆಸರಿಡುವ ವಿಚಾರವಾಗಿ ನಾನು ಯಾರ ಜೊತೆ ಚರ್ಚೆಯನ್ನ ಮಾಡಿಲ್ಲ ಎಂದು ಅವರು ಹೇಳಿದರು.