ಚಿಕ್ಕಮಗಳೂರು : ಅವಾಚ್ಯ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಮ್ ಎಲ್ ಸಿ ಸಿಟಿ ರವಿಗೆ ಕೊಲೆ ಬೆದರಿಕೆ ಪತ್ರ ಬಂದಿರುವ ಮಾಹಿತಿ ಇದೀಗ ಲಭ್ಯವಾಗಿದೆ.
ಚಿಕ್ಕಮಗಳೂರಿನ ಬಸವನಹಳ್ಳಿಯ ಸಿಟಿ ರವಿ ನಿವಾಸಕ್ಕೆ ಕೊಲೆ ಬೆದರಿಕೆ ಪತ್ರ ಬಂದಿದ್ದು, ಅವಾಚ್ಯ ಶಬ್ದ ಬಳಕೆ ಮಾಡಿದ್ದಕ್ಕೆ ನೀವು 15 ದಿನದೊಳಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕ್ಷಮೆ ಕೇಳಬೇಕು, ಇಲ್ಲವಾದಲ್ಲಿ ನಿಮ್ಮನ್ನು ಹತ್ಯೆ ಮಾಡುವುದಾಗಿ ಪತ್ರದಲ್ಲಿ ಸಿಟಿ ರವಿ ಅವರ ಪುತ್ರ ಸೂರ್ಯನಿಗೂ ಈ ಬೆದರಿಕೆ ಪತ್ರ ಬಂದಿದೆ ಎನ್ನಲಾಗಿದೆ.
ಘಟನೆ ಸಂಬಂಧ ಸಿಟಿ ರವಿ ಪಿಎ ಚೇತನ್ ಅವರು ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.