ಚಿಕ್ಕೋಡಿ:- ತಾಲೂಕು ಕಾನೂನು ಸೇವೆಗಳ ಸಮಿತಿಯು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ಸಹಯೋಗದಲ್ಲಿ ಡಿ.೧೪ ರಂದು “ರಾಷ್ಟ್ರೀಯ ಲೋಕ ಅದಾಲತ್” ಆಯೋಜಿಸಲಾಗಿದೆ ಎಂದು ಚಿಕ್ಕೋಡಿಯ ೭ ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕಾವೇರಿ ಹೇಳಿದರು.
ಚಿಕ್ಕೋಡಿ ಜಿಲ್ಲಾ ನ್ಯಾಯಾಲಯದ ಸಭಾಗೃಹದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣವಕಾಶವಾಗಿದೆ ಎಂದು ತಿಳಿಸಿದರು.
ಲೋಕಅದಾಲತ್ನಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು ಇತರೆ ಪ್ರಕರಣಗಳು,(ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು, ಮತ್ತು ಇತರೆ ಸಿವಿಲ್ ಪ್ರಕರಣಗಳು,ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು,ಸಾಲ ವಸೂತಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ,ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು.
ನ್ಯಾಯಾಲಯದಲ್ಲಿ ಬಾಕಿ ಇರುವ ಪರಕರಣಗಳು ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು ವಿದ್ಯುತ್ ಹಾಗೂ ನೀರಿನ ಶುಲ್ಕಗಳು ವೈವಾಹಿಕ ಪ್ರಕರಣಗಳು (ವಿಚ್ಛೇದನ ಹೊರತುಪಡಿಸಿ), ಭೂಸ್ವಾಧೀನ ಪ್ರಕರಣಗಳು ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು ಕಂದಾಯ ಪ್ರಕರಣಗಳು ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.
ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ.ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ
ಕಲ್ಪಿಸಲಾಗಿದೆ.
ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು.
ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದರು.
ಪ್ರತಿದಿನ ಚಿಕ್ಕೋಡಿಯ ಎಲ್ಲ ನ್ಯಾಯಾಲಯಗಳಲ್ಲಿ ಸಾಯಂಕಾಲ ೦೪.೦೦ ರಿಂದ ೦೬.೦೦ ಗಂಟೆಯ ವರೆಗೆ ಲೋಕ್ ಅದಾಲತ್ ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್ಗಳು ಭೌತಿಕ ಹಾಗೂ ವಿಡಿಯೋ ಕಾನ್ಸರೆನ್ಸ್ ಮೂಲಕ ನಡೆಯುತ್ತಲಿವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಹಿರಿಯ ದಿವಾನಿ ನ್ಯಾಯಾಧೀಶ ಹರೀಶ ರಂಗನಗೌಡ ಪಾಟೀಲ,೧ನೇ ಹೆಚ್ಚುವರಿ ದಿವಾನಿ ನ್ಯಾಯಾದೀಶ ತೃಪ್ತಿ ಧರಣೆ, ವಕೀಲರ ಸಂಘಧ ಅಧ್ಯಕ್ಷ ಕಲ್ಮೇಶ ಕಿವಡ,ಮಹಿಳಾ ಪ್ರತಿನಿಧಿ ಅಣ್ಣಪೂರ್ಣಾ ಚೌಗಲಾ,ಉಪಾಧ್ಯಕ್ಷ ಸುಭಾಷ ಯರನಾಳೆ ಉಪಸ್ಥಿತರಿದ್ದರು.
ವರದಿ:- ರಾಜು ಮುಂಡೆ .