ಬೆಂಗಳೂರು: ಹಿರಿಯ ನಟ ಸರಿಗಮ ವಿಜಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರಿಗಮ ವಿಜಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ನಾಲ್ಕು ದಿನಗಳಿಂದ ಬೆಂಗಳೂರಿನ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಸರಿಗಮ ವಿಜಿ ಪುತ್ರ ರೋಹಿತ್ ತಿಳಿಸಿದ್ದಾರೆ.
1980ರಲ್ಲಿ ಗೀತಪ್ರಿಯ ನಿರ್ದೇಶನದ ಬೆಳವಳದ ಮಡಿಲಲ್ಲಿ ಎಂಬ ಸಿನಿಮಾದಲ್ಲಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಆರ್.ವಿಜಯ್ ಕುಮಾರ್ ಬಳಿಕ ಸರಿಗಮ ವಿಜಿ ಎಂದೇ ಖ್ಯಾತಿ ಪಡೆದರು. 80 ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ, 2400 ಧಾರಾವಾಹಿಗಳಿಗೆ ನಿರ್ದೇಶನದ ಜೊತೆ ನಟನೆ, 269 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.