ಮೊಳಕಾಲ್ಮೂರು : ಚನ್ನಪಟ್ಟಣ ಸಂಡೂರು ಸಿಗ್ಗಾವಿಯಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿರುವುದಕ್ಕೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಸೇರಿ ಖಾಸಗಿ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಎಸ್ ಖಾದರ್ ಮಾತನಾಡಿ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುತ್ತದೆ ಇಡೀ ರಾಜ್ಯದ್ಯಂತ ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ತುಂಬಾ ಅನುಕೂಲವಾಗಿದೆ, ಕುರುಕ್ಷೇತ್ರಗಳಲ್ಲಿ ಅತ್ಯಂತ ಬಹುಮತಗಳಿಂದ ಗೆದ್ದು ಬಿಗಿದ್ದಾರೆ ಆ ಮೂರೂ ಕ್ಷೇತ್ರದ ಮತದಾರರಿಗೆ ಮೊಳಕಾಲ್ಮೂರು ಕ್ಷೇತ್ರದ ಶಾಸಕರಾದ ಎನ್ ವೈ ಗೋಪಾಲಕೃಷ್ಣ ಅವರು ಸಂಡೂರು ಕ್ಷೇತ್ರದಲ್ಲಿ ಚುನಾವಣೆಯ ಮತ ಬೇಟೆ ನಡೆಸಿದ್ದರು ಅದರ ಪ್ರತಿಫಲವೇ ಸಂಡೂರಿನಲ್ಲಿ ಭರ್ಜರಿ ಜಯಭೇರಿ ಬಾರಿಸಿದೆ ಆದ್ದರಿಂದ ಮೂರು ಕ್ಷೇತ್ರದ ಮತದಾರರಿಗೆ ಶಾಸಕರಾದ ಎನ್ ವೈ ಗೋಪಾಲಕೃಷ್ಣ ಮತ್ತು ಮೊಳಕಾಲ್ಮೂರು ಕಾಂಗ್ರೆಸ್ ಕಾರ್ಯಕರ್ತರಿಂದ ಅನಂತ ಅನಂತ ಧನ್ಯವಾದಗಳು ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಏರ್ಜೇನಹಳ್ಳಿ ನಾಗರಾಜ್ ಕೂಡ ತಮ್ಮ ಅನಿಸಿಕೆಗಳನ್ನು ತಿಳಿಸಿದರು. ಒಟ್ಟಿನಲ್ಲಿ ಜಿದ್ದಾಜಿದ್ದಿಗೆ ಜೆಡಿಎಸ್ ಬಿಜೆಪಿ ಕಾಂಗ್ರೆಸ್ ಪಕ್ಷದವರು ಗೆಲ್ಲುವ ಪಣ ತೊಟ್ಟಿದ್ದರು, ಆದರೆ ಮತದಾರ ಪ್ರಭುಗಳೇ ಅಂತಿಮ.
ಈ ಸಂದರ್ಭದಲ್ಲಿ ಮುಖಂಡರಾದ ಮಾರನಾಯಕ, ಮೊಳಕಾಲ್ಮುರು ಗ್ಯಾರಂಟಿ ಯೋಜನೆ ಸಮಿತಿಯ ಸದಸ್ಯರಾದ ಮೊಹಮ್ಮದ್ ರಫಿ ,ಪಟ್ಟಣ ಪಂಚಾಯತಿ ಸದಸ್ಯರುಗಳಾದ ಓಬಣ್ಣ, ಮೇಸ್ತ್ರಿ ಗೋಪಾಲ್, ಶಿವಲಿಂಗ, ತಾಲೂಕು ಅಲ್ಪಸಂಖ್ಯಾತರ ಘಟಕದ ಜುಬೇರ್ ಅಹಮದ್, ಜಯಣ್ಣ, ರಾಯಪುರ ಮಲ್ಲಿ, ತುಮಕೂರ್ಲಾ ಹಳ್ಳಿ ತಿಪ್ಪೇಸ್ವಾಮಿ, ಇನ್ನು ಹಲವರು ಉಪಸ್ಥಿತರಿದ್ದರು.
ವರದಿ : ಪಿಎಂ ಗಂಗಾಧರ