Ad imageAd image

ದೋಸ್ತಿ ಪಕ್ಷಗಳಿಗೆ ಬುದ್ದಿ ಕಲಿಸಿದ ಜನ : ಸಿದ್ದರಾಮಯ್ಯನವರ ಆಪ್ತ ಹೊಳಬಸು ಶೆಟ್ಟರ ಹೇಳಿಕೆ

Bharath Vaibhav
ದೋಸ್ತಿ ಪಕ್ಷಗಳಿಗೆ ಬುದ್ದಿ ಕಲಿಸಿದ ಜನ : ಸಿದ್ದರಾಮಯ್ಯನವರ ಆಪ್ತ ಹೊಳಬಸು ಶೆಟ್ಟರ ಹೇಳಿಕೆ
WhatsApp Group Join Now
Telegram Group Join Now

ಬಾಗಲಕೋಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಜನಪರ ಎಂಬುದನ್ನು ರಾಜ್ಯದ‌ ಮೂರು‌ ಕ್ಷೇತ್ರಗಳ ಮತದಾರರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಯುವ ಮುಖಂಡ, ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಮುಖಂಡ ಹೊಳಬಸು ಶೆಟ್ಟರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಿಜೆಪಿ-ಜೆಡಿಎಸ್ ಒಟ್ಟಾಗಿ ಸೇರಿಕೊಂಡು ಕಾಂಗ್ರೆಸ್ ಮಣಿಸಬೇಕೆಂಬ ಎರಡೂ ಪಕ್ಷಗಳ ತಂತ್ರಕ್ಕೆ ರಾಜ್ಯದ ಜನರು ತಕ್ಕ ಉತ್ತರ ಕೊಟ್ಟಿದ್ದಾರೆ. ಅದರಲ್ಲೂ ಇಬ್ಬರು ಮಾಜಿ ಮುಖ್ಯಮಂತ್ರಿಗಳು, ತಮ್ಮದೇ ಕ್ಷೇತ್ರದಲ್ಲಿ ಜನ ಬೆಂಬಲ ಕಳೆದುಕೊಂಡಿದ್ದಾರೆ ಎಂಬುದು ಅವರ ಪುತ್ರರ ಸೋಲು ತೋರಿಸುತ್ತದೆ ಎಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ‌ ಮೇಲೆ ಮುಡಾ ಹಗರಣ,ಗ್ಯಾರಂಟಿ ಯೋಜನೆಗಳ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ, ಜನರ ಎದುರು ಸುಳ್ಳು ಹೇಳುತ್ತ ಹೊರಟಿದ್ದ ಬಿಜೆಪಿ ಮತ್ತು ಜೆಡಿಎಸ್ ಗೆ ಜನರೇ ತಕ್ಕ ಉತ್ತರ ಕೊಟ್ಟಿದ್ದಾರೆ. ರಾಜ್ಯದಲ್ಲಿ ಒಮ್ಮೆಯೂ ಸ್ವತಂತ್ರವಾಗಿ ಅಧಿಕಾರಕ್ಕೆ ಬಾರದೇ, ವಾಮಮಾರ್ಗದಲ್ಲಿ ಅಧಿಕಾರ‌ ನಡೆಸಿದ್ದ ಬಿಜೆಪಿ, ಇನ್ನಾದರೂ ಅಪಪ್ರಚಾರ, ಸುಳ್ಳು ಆರೋಪ ಮಾಡುವುದು ಬಿಡಬೇಕು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಮೂರು ಕ್ಷೇತ್ರಗಳ ಉಪ‌ ಚುನಾವಣೆಯಲ್ಲಿ ಜನರು ಮೆಚ್ಚಿ, ಕಾಂಗ್ರೆಸ್ ಗೆ ಗೆಲುವು ನೀಡಿದ್ದಾರೆ ಎಂದು ಶೆಟ್ಟರ ತಿಳಿಸಿದ್ದಾರೆ.

ವರದಿ: ರಾಜೇಶ್. ಎಸ್. ದೇಸಾಯಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!