ಪಾವಗಡ. ಹಿಂದೂ ಧರ್ಮಕ್ಕೆ ಮಹಾನ್ ಗ್ರಂಥವನ್ನು ರಚಿಸಿದ ವಿಶ್ವಕವಿ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮವನ್ನು ಮುಗದಾಳ ಬೆಟ್ಟ ಗ್ರಾಮದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು
ಕಾರ್ಯಕ್ರಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಮೆರವಣಿಗೆಗೆ ಚಾಲನೆ ನೀಡಿ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಮಾತನಾಡಿ ಭೂಮಿಯ ಮೇಲೆ ಸೂರ್ಯ ಚಂದ್ರ ಇರುವವರೆಗೂ ಶ್ರೀ ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಅಜರಾಮರವಾಗಿ ನಿಲ್ಲುತ್ತದೆ. ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣದಿಂದ ರಾಷ್ಟ್ರದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ರಾಮರಾಜ್ಯದ ಕನಸು ಕಂಡಿದ್ದು ಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ತಾಲೂಕು ನಾಯಕ ನೌಕರ ಸಂಘದ ಅಧ್ಯಕ್ಷರಾದ ಅನಿಲ್ ಕುಮಾರ್ ಮಾತನಾಡಿ ವಾಲ್ಮೀಕಿ ಸಮುದಾಯದ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಕನಸು ಕಾಣಬೇಕು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದು ಕರೆ ನೀಡಿದರು
ಕಾರ್ಯಕ್ರಮದಲ್ಲಿ ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷರಾದ ಪಾಳೇಗಾರ ಲೋಕೇಶ್. ಜಾಗೃತಿ ವೇದಿಕೆಯ ಸಹ ಕಾರ್ಯದರ್ಶಿ ಭಾಸ್ಕರ್ ನಾಯಕ. ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್. ನರಸಿಂಹಮೂರ್ತಿ. ಗೋಪಾಲಪ್ಪ. ಜಾಗೃತಿ ವೇದಿಕೆ ಉಪಾಧ್ಯಕ್ಷ ದಿವಾಕರ್. ಮಹಿಳಾ ಅಧ್ಯಕ್ಷ ಅಂಬಿಕಾರಮೇಶ್. ನಿಡಗಲ್ ಹೋಬಳಿ ಅಧ್ಯಕ್ಷ ಓಂಕಾರ್ ನಾಯಕ .ರಮೇಶ್ ಡಿ ರಾಮಪ್ಪ. ಸಣ್ಣ ರಾಮಯ್ಯ. ಮೋಹನ್ ನಾಯಕ. ಕೃಷ್ಣಪ್ಪ. ನಾಗರಾಜು. ಓಬನಾಯಕ. ಶಿವಣ್ಣ. ಮುಂತಾದವರು ಭಾಗವಹಿಸಿದ್ದರು