ಬೆಂಗಳೂರು : ನಿನ್ನ ನೋಡಬೇಕು ಬಾ ಅಂತ ಪ್ರಿಯತಮೆ ಒಬ್ಬಳು ತನ್ನ ಪ್ರಿಯತಮನನ್ನು ಕರೆಸಿಕೊಂಡು ತನ್ನ ಇತರೆ ಸ್ನೇಹಿತರೊಂದಿಗೆ ಆತನನ್ನು ಅಪಹರಿಸಿ, ಬೆದರಿಕೆ ಒಡ್ಡಿ ಆತನಿಂದ 5 ಲಕ್ಷ ರೂಪಾಯಿ ಹಣ ಸುಲಿಗೆ ಮಾಡಿದ್ದಾಳೆ.
ಒಂದು ಘಟನೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 7 ಜನರನ್ನು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರಿನ ಕೋರಮಂಗಲ ಪೊಲೀಸರಿಂದ ಖತರ್ನಾಕ್ ಗ್ಯಾಂಗ್ ಬಂಧನವಾಗಿದೆ. ಆಂಧ್ರದ ನೆಲ್ಲೂರು ಮೂಲದ ಏಳು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು. ಆಂಧ್ರದಲ್ಲಿ ಕಿಡ್ನಾಪ್ ಮಾಡಿ ಪಾವಗಡ ಹಾಗೂ ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಿ ಹಣ ಸುಲಿಗೆ ಮಾಡಿದ ಆರೋಪವನ್ನು ಇವರು ಎದುರಿಸುತ್ತಿದ್ದಾರೆ. ಪ್ರಿಯಕರನೊಂದಿಗೆ ಸೇರಿ ಮಾಜಿ ಪ್ರಿಯಕರನ ಟ್ರ್ಯಾಪ್ ಮಾಡಿ ಸುಲಿಗೆ ಮಾಡಿದ್ದಾಳೆ.
ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಶಿವ ಮತ್ತು ಮೋನಿಕಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಎಲ್ಲವೂ ಚೆನ್ನಾಗಿಯೇ ಇತ್ತು. ಹೀಗಿರುವಾಗ ಶಿವನಿಗೆ ಕರೆ ಮಾಡಿ ನನ್ನ ಸ್ನೇಹಿತರು ನಿನ್ನ ನೋಡಬೇಕಂತೆ, ನಿನ್ನ ಹತ್ರ ಇರುವ ಚಿನ್ನಾಭರಣ ಹಾಕ್ಕೊಂಡು, ಇನ್ನೋವಾ ಕಾರಿನಲ್ಲಿ ಬಾ ಅಂತಾ ಫೋನ್ ಮಾಡಿದ್ಲು. ಮೋನಿಕಾ ಮಾತು ನಂಬಿದ ಪ್ರಿಯಕರ 60 ಗ್ರಾಂ ಚಿನ್ನಾಭರಣದ ಜೊತೆಗೆ ಇನ್ನೋವಾ ಕಾರಿನಲ್ಲಿ ಬಂದಿದ್ದಾನೆ.
ಈ ವೇಳೆ ಮೋನಿಕಾ ಅಂಡ್ ಗ್ಯಾಂಗ್ ಶಿವನನ್ನ ಕಿಡ್ನ್ಯಾಪ್ ಮಾಡಿ ಮೈಮೇಲಿದ್ದ ಚಿನ್ನಾಭರಣ ದೋಚಿ 10 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಆದ್ರೆ ಪ್ರಿಯತಮೆ ಶಿವನಿಗೆ 5 ಲಕ್ಷ ರೂ. ಕೊಡೋಕೆ ಒಪ್ಪಿಸಿದ್ದಳು.
ಎಟಿಎಂ ಕಾರ್ಡ್ ಬೆಂಗಳೂರಿನ ಮೆಜೆಸ್ಟಿಕ್ ಅಡ್ರೆಸ್ಗೆ ಕೋರಿಯರ್ ಮಾಡಿಸಿಕೊಡು ಕೋರಮಂಗಲಕ್ಕೆ ಹಣ ಡ್ರಾ ಮಾಡಿಕೊಳ್ಳೋಕೆ ಬಂದಿದ್ದರು. ಆದ್ರೆ ಕೋರಮಂಗಲದ ಎಟಿಎಂನಲ್ಲಿ ಹಣ ಡ್ರಾ ಮಾಡುವ ವೇಳೆ ಆರೋಪಿಗಳ ಮಧ್ಯೆ ಗಲಾಟೆ ನಡೆದಿದೆ.
ಇದೇ ವೇಳೆ ರೌಂಡ್ಸ್ನಲ್ಲಿದ್ದ ಪಿಎಸ್ಐ ಮಾದೇಶ್ ಅನುಮಾನಗೊಂಡು ವಿಚಾರಣೆ ನಡೆಸಿದಾಗ ಕಿಡ್ನ್ಯಾಪ್ ಮತ್ತು ಸುಲಿಗೆ ಪ್ರಕರಣ ಬೆಳಕಿಗೆ ಬಂದಿದೆ.
ಪ್ರಿಯತಮೆ ಮೋನಿಕಾಳೇ ಕಿಂಗ್ ಪಿನ್ ಅನ್ನೋದನ್ನು ಕೇಳಿ ಪ್ರಿಯಕರ ಶಿವ ಶಾಕ್ ಆಗಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಕೋರಮಂಗಲ ಪೊಲೀಸರು ಆರೋಪಿಗಳಾದ ಮೋನಿಕಾ, ಹರೀಶ್, ಹರಿಕೃಷ್ಣ, ನರೇಶ್, ರಾಜ್ ಕುಮಾರ್, ನರಸಿಂಹ, ಅಂಜನೀಲ್ನನ್ನ ಬಂಧಿಸಿದ್ದಾರೆ. ಬಂಧಿತ ಏಳು ಮಂದಿಯೂ ಆಂಧ್ರದ ನೆಲ್ಲೂರು ಮೂಲದವರು ಎಂದು ತಿಳಿಸಿದ್ದಾರೆ.