ರಾಯಚೂರು : ಸಹೋದರರ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆದಿದ್ದು ಸಹೋದರರ ಕಿರುಕುಳಕ್ಕೆ ಬೇಸತ್ತ, ರಾಯಚೂರು ಜಿಲ್ಲಾ ರೈತ ಅಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆಗೆ ಯತಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ.
ಹೌದು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟೆ ಬಳಿ ಈ ಒಂದು ಘಟನೆ ನಡೆದಿದೆ.ರಾಯಚೂರು ಜಿಲ್ಲಾ ರೈತ ಸಂಘದ ಅಧ್ಯಕ್ಷ ಶಿವಪುತ್ರಪ್ಪ (42) ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ಗಲಾಟೆಯಾಗಿತ್ತು. ಸಹೋದರ ಕಿರುಕುಳಕ್ಕೆ ಬೇಸತ್ತು ಶಿವಪುತ್ರಪ್ಪ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಇದೀಗ ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶಿವಪುತ್ರಪ್ಪಗೆ ಚಿಕಿತ್ಸೆ ನೀಡಲಾಗುತ್ತಿದೆ.ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.