ಬಳ್ಳಾರಿ:ಧರ್ಮಗಳ ಸಂಘರ್ಷ ಆಗದಿರುವ ಹಾಗೆ ಮತ್ತು ಎಲ್ಲಾರೂ ಸಹಬಾಳ್ವೆಯಿಂದ ಬದುಕುವಂತಹ ವಾತಾವರಣ ನಿರಂತರವಾಗಿ ಕಾಪಾಡುವಂತಹ ಸಂದೇಶ ಕೊಡುವುದೇ ಜಿಲ್ಲಾ ಸಹಮತ ವೇದಿಕೆ ಮುಖ್ಯ ಉದ್ದೇಶ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷ ಸಿರಿಗೇರಿ ಪನ್ನರಾಜ್ ಹೇಳಿದರು.ನಗರದ ಖಾಸಗಿ ಹೋಟೆಲೊಂದರಲ್ಲಿ ಸೌಹಾರ್ದ ಕರ್ನಾಟಕ ಸಂಘಟನೆ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷ ಸಿರಿಗೇರಿ ಪನ್ನರಾಜ್ ಅವರು ಮಾತನಾಡಿದರು.
ಅತ್ಯಂತ ಅಪಾಯಕಾರಿ ಕೋಮು ಚಟುವಟಿಕೆಗಳು ಪ್ರಭುತ್ವ ಪ್ರೇರಿತ ಅಧಿಕಾರದ ಮೂಲಕ ನಡೆಯುತ್ತಿವೆ, ಈ ನಡೆಗಳು ಬದುಕನ್ನು ಇನ್ನಷ್ಟು ದುರ್ಬಲಗೊಳಿಸುತ್ತವೆ. ಈಗಾಗಲೇ ಬಡತನ, ಅಪೌಷ್ಠಿಕತೆ, ಅನಿಯಂತ್ರಿತ ವಲಸೆ, ನಿರುದ್ಯೋಗ, ಪ್ರಾದೇಶಿಕ ಅಸಮಾನತೆ, ಮೌಡ್ಯಗಳಿಂದ ನಲುಗುತ್ತಿರುವ ಜನಸಮುದಾಯಗಳನ್ನು ಮತ್ತಷ್ಟು ಪ್ರಪಾತಕ್ಕೆ ತಳ್ಳುತ್ತವೆ. ತರುಣ ಪೀಳಿಗೆ ಕೋಮುದ್ವೇಷದ ದುಳ್ಳುರಿಗೆ ಸಿಲುಕದಂತೆ ನೋಡಿಕೊಳ್ಳುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಅದಕ್ಕಾಗಿ 2025ರ ಜನವರಿ 17 ರಿಂದ ಮೂರು ದಿನಗಳವರೆಗೆ ಕಲಬುರಗಿಯಲ್ಲಿ ರಾಜ್ಯ ಮಟ್ಟದ ಸೌಹಾರ್ದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.
ವರದಿ: ಚೆನ್ನಕೇಶವ ಕಂಪ್ಲಿ