ವಿಜಯಪುರ : ನಾಲ್ವರು ಮಕ್ಕಳನ್ನು ಕಾಲುವೆಗೆ ತಳ್ಳಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಭಾಗ್ಯಶ್ರೀ ವಿರುದ್ಧ ಸೆಕ್ಷನ್ 302 ಅಡಿಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಪ್ರತ್ಯಕ್ಷದರ್ಶಿ ಫಾರೆಸ್ಟ್ ಗಾರ್ಡ್ ನೀಡಿದ ಹೇಳಿಕೆ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಭಾಗ್ಯಶ್ರೀ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
ನಾಲ್ಕು ಮಕ್ಕಳ ಜೊತೆಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ಬಳಿ ನಡೆದಿತ್ತು.
ತನು ನಿಂಗರಾಜ ಭಜಂತ್ರಿ (5), ರಕ್ಷಾ ನಿಂಗರಾಜ ಭಜಂತ್ರಿ (3), ಹಸೇನ್ ನಿಂಗರಾಜ ಭಜಂತ್ರಿ (2) ಹಾಗೂ ಹುಸೇನ್ ನಿಂಗರಾಜು ಭಜಂತ್ರಿ (2) ಮೃತ ಮಕ್ಕಳು.
ಆತ್ಮಹತ್ಯೆಗೆ ಯತ್ನಿಸಿದ ತಾಯಿ ಭಾಗ್ಯರನ್ನು ಸ್ಥಳೀಯರು ರಕ್ಷಿಸಿದ್ದರು.ನಂತರ ಭಾಗ್ಯಶ್ರೀ ತನ್ನ ಪತಿಯೇ ನನ್ನ ಹಾಗೂ ಮಕ್ಕಳನ್ನು ನಾಲೆಗೆ ತಳ್ಳಿದ್ದನು ಎಂದು ಪೊಲೀಸರಿಗೆ ಹೇಳಿಕೆ ನೀಡಿದ್ದಳು.
ನನ್ನ ಪತಿಯೇ ಮಕ್ಕಳು ಮತ್ತು ನನ್ನನ್ನು ನೀರಿಗೆ ತಳ್ಳಿದ್ದಾಗಿ ಭಾಗ್ಯಶ್ರೀ ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದರು. ಆದರೆ ಪ್ರತ್ಯಕ್ಷದರ್ಶಿಗಳ ಪ್ರಕಾರ ತಾಯಿಯೇ ಮಕ್ಕಳನ್ನು ನಾಲೆಗೆ ತಳ್ಳಿರುವುದು ಬಯಲಾಗಿದೆ.