ತಿರುಪತಿಯಲ್ಲಿ ಇತ್ತೀಚಿಗಷ್ಟೇ ಸಂಭವಿಸಿದ್ದ ಕಾಲ್ತುಳಿತ ದುರಂತ ಮಾಸುವ ಮುನ್ನವೇ ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಮಂಡಳಿಯ ಅತಿಥಿಗೃಹದಲ್ಲಿ ಮೂರು ವರ್ಷದ ಬಾಲಕನೊಬ್ಬ
ಮೆಟ್ಟಿಲು ಮೇಲಿಂದ ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಪೋಷಕರೊಂದಿಗೆ ವೆಂಕಟೇಶ್ವರ ಸ್ವಾಮಿ ದೇವರ ದರ್ಶನಕ್ಕಾಗಿ ಬಂದಿದ್ದ
ಬಾಲಕ ಪದ್ಮನಾಭ ನಿಲಯದ ಮೊದಲ ಮಹಡಿಯಲ್ಲಿ
ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾನ’ ಎಂದು
ಅಧಿಕಾರಿಯೊಬ್ಬರು ಹೇಳಿದ್ದಾರೆ.
‘ಕುಟುಂಬಸ್ಥರು ಗುರುವಾರ ಸಂಜೆ ದೇವರ ದರ್ಶನಕ್ಕೆ ಕಾಯುತ್ತಿದಾಗ ಈ ದುರಂತ ಸಂಭವಿಸಿದೆ. ಘಟನೆ ಸಂಬಂಧ ಪುಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.