ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಆಪ್ತ, ಮಾಜಿ ಎಂ ಎಲ್ ಸಿ ಪಟೇಲ್ ಶಿವರಾಮ್ ವಿಧಿವಶರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಪಟೇಲ್ ಶಿವರಾಮ್, ನಾಲ್ಕು ದಶಕಗಳ ಕಾಲ ಜೆಡಿಎಸ್ ನಲ್ಲಿ ಸಕ್ರಿಯ ರಾಜಕರಣ ಮಾಡಿದ್ದರಲ್ಲದೇ, ಹಾಸನದ ಪ್ರಭಾವಿ ಮುಖಂಡರಾಗಿದ್ದರು.
ವಿಧಾನ ಪರಿಷತ್ ಸದಸ್ಯ, ಅಪೆಕ್ಸ್ ಬ್ಯಾಂಕ್ ನಿರ್ದೇಶಕ, ಹೆಚ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೇರಿದಂತೆ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.
ಹಾಸನ ನಗರದ ಹೌಸಿಂಗ್ ಬೋರ್ಡ್ ನಿವಾಸದಲ್ಲಿ ಇಂದು ಬೆಳಿಗ್ಗೆ ಪಟೇಲ್ ಶಿವರಾಮ್ ನಿಧನರಾಗಿದ್ದಾರೆ. ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.