Ad imageAd image

ನರೇಗಾ ಹೊರಗುತ್ತಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ 

Bharath Vaibhav
ನರೇಗಾ ಹೊರಗುತ್ತಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ 
WhatsApp Group Join Now
Telegram Group Join Now

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯಗತಗೊಳಿಸುತ್ತಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ 3352 ಸಿಬ್ಬಂದಿಗಳಿಗೆ ಸಾಮೂಹಿಕ ವೈದ್ಯಕೀಯ ವಿಮೆ ಸೌಲಭ್ಯವನ್ನು ಒದಗಿಸಲು ಇಂದು ನಡೆದ ರಾಜ್ಯ ಸಚಿವ ಸಂಪುಟ ತನ್ನ ಒಪ್ಪಿಗೆ ನೀಡಿದ್ದು ಇದಕ್ಕಾಗಿ ವಾರ್ಷಿಕ 8.34 ಕೋಟಿ ವೆಚ್ಚ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಮುಂದಿನ 3 ವರ್ಷಗಳಲ್ಲಿ ಈ ಯೋಜನೆ ಜಾರಿಗೊಳಿಸಲು ಅಂದಾಜು 2,514 ಲಕ್ಷ ರೂ ವೆಚ್ಚವಾಗಲಿದೆ. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯ, ಜಿಲ್ಲೆ, ತಾಲ್ಲೂಕು, ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಅನುಷ್ಠಾನ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇ.ಎಸ್.ಐ. ಸೌಲಭ್ಯ ಹೊಂದಿರುವ ಸಿಬ್ಬಂದಿಗಳನ್ನು ಹೊರತುಪಡಿಸಿದಂತೆ ಉಳಿದ ಸಿಬ್ಬಂದಿಗಳಿಗೆ ಸಾಮೂಹಿಕ ವೈದ್ಯಕೀಯ ವಿಮೆ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.

“ರಾಜ್ಯದಾದ್ಯಂತ ನರೇಗ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಹೊರಗುತ್ತಿಗೆ ನೌಕರರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಈ ಆರೋಗ್ಯ ವಿಮಾ ಯೋಜನೆಯನ್ನು ಪರಿಚಯಿಸುವ ಮೂಲಕ, ನೌಕರರ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಸುರಕ್ಷತಾ ಜಾಲವನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ” ಎಂದು ಹೇಳಿದ್ದಾರೆ.

“ಪ್ರಸ್ತುತ ರಾಜ್ಯ-ಚಾಲಿತ ಕಿಯೊನಿಕ್ಸ್ ಸಂಸ್ಥೆಯಲ್ಲಿ ಹೊರಗುತ್ತಿಗೆ ಸಿಬ್ಬಂದಿಗೆ ಇದೇ ರೀತಿಯ ಗುಂಪು ಆರೋಗ್ಯ ವಿಮಾ ಯೋಜನೆ ಜಾರಿಯಲ್ಲಿದೆ. ನೌಕರರ ಆರೋಗ್ಯ ಭದ್ರತೆಯನ್ನು ಗಮನದಲ್ಲಿರಿಸಿಕೊಂಡು ಸಾಧಾರಣ ವೇತನಕ್ಕಾಗಿ ದೈಹಿಕವಾಗಿ ಬೇಡಿಕೆಯ ಕೆಲಸಗಳನ್ನು ಮಾಡುವಲ್ಲಿ ನಿರತರಾಗಿರುವ ನರೇಗ ನೌಕರರಿಗೂ ವೈದ್ಯಕೀಯ ವಿಮೆ ಸೌಲಭ್ಯವನ್ನು ವಿಸ್ತರಿಸಲಾಗಿದೆ” ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!