ರಾಂಚಿ: ಜಾರ್ಖಂಡ್‌ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಅವರು ಸತತ ನಾಲ್ಕನೇ ಬಾರಿಗೆ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಂಚಿಯ ಮೊರಾಬಾದಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
ಜಾರ್ಖಂಡ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋರೆನ್ ಅವರ ಜೆಎಂಎಂ ನೇತೃತ್ವದ ಮೈತ್ರಿಕೂಟ 81 ಸ್ಥಾನಗಳಲ್ಲಿ 56 ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರ ಗಿಟ್ಟಿಸಿಕೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಕೇವಲ 24 ಸ್ಥಾನಗಳಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.