ಬೆಳಗಾವಿ: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳನ್ನು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹಾಡಿ ಹೊಗಳಿದ್ದಾರೆ. ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಹಿಂದುಳಿಯುತ್ತದೆ ಎನ್ನುವುದು ತಪ್ಪು.ಗ್ಯಾರಂಟಿ ಯೋಜನೆಗಳಿಂದ 7 ಸಾವಿರ ಕೋಟಿ ರೂ. ಖರ್ಚಾಗುತ್ತದೆ ಎಂದು ಹೇಳಿದ್ದಾರೆ. ಇದಕ್ಕೆ ಹಣ ಹೇಗೆ ಹೊಂದಿಸಬೇಕು ಎಂಬುದು ಕೂಡಾ ಅವರಿಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಸ್ವತಃ ಹಣಕಾಸು ಮಂತ್ರಿಯೂ ಆಗಿದ್ದಾರೆ. ಹಲವು ಬಾರಿ ಬಜೆಟ್ಗಳನ್ನು ಕೂಡಾ ಮಂಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೇಗೆ ಬಳಸಬೇಕು ಎಂಬುದು ಅವರಿಗೆ ತಿಳಿದಿದೆ.
ಗ್ಯಾರಂಟಿ ಯೋಜನೆಗಳಿಗೆ 7 ಸಾವಿರ ಕೋಟಿ ರೂ. ಖರ್ಚಾಗುತ್ತದೆ ಎಂದಿದ್ದಾರೆ. ಇದರ ಎರಡರಷ್ಟು ಟ್ಯಾಕ್ಸ್ ಏರಿಸಿದ್ದಾರೆ. ಗ್ಯಾರಂಟಿಯಿಂದ ಅಭಿವೃದ್ಧಿ ಆಗುವುದಿಲ್ಲ ಎನ್ನುವುದು ಸುಳ್ಳು ಎಂದು ಹೇಳಿದರು.




