ನವದೆಹಲಿ : ಸಚಿವ ಸಂಪುಟ ಪುನರ್ ರಚನೆ ಕಲ್ಪಿತ ಸುದ್ದಿ , ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಂಪುಟ ಪುನರ್ ರಚನೆ ಕಲ್ಪಿತ ಸುದ್ದಿ:, ಮಾಧ್ಯಮಗಳು ಸಂಪುಟ ಪುನರ್ ರಚನೆಯ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ.
ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನರ್ರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು.
ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ನಾನು ರಾಹುಲ್ ಗಾಂಧಿಯವರು ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದರು.