ಬೆಂಗಳೂರು : ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವೈವಾಹಿಕ ವಿವಾದಗಳ ಪ್ರಕರಣಗಳಲ್ಲಿ ಮಹಿಳೆಯರು ಹೆಚ್ಚಾಗಿ ಬಲಿಪಶುಗಳಾಗಿದ್ದರೂ,ಅಂತಹ ಪ್ರಕರಣಗಳಲ್ಲಿ ಪುರುಷರು ಸಹ ಸಂತ್ರಸ್ತರಾಗಿದ್ದಾರೆ, ಆದ್ದರಿಂದ ಲಿಂಗ ಸಮಾನತೆಯ ಸಮಾಜ ಈಗಿನ ಅಗತ್ಯವಾಗಿದೆ ಎಂಬ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
ಈ ಬಗ್ಗೆ ಜನವರಿ 7 ರಂದು ಹೊರಡಿಸಿದ ಆದೇಶದಲ್ಲಿ, ನ್ಯಾಯಮೂರ್ತಿ ಡಾ. ಚಿಲ್ಲಕೂರ್ ಸುಮಲತಾ ಅವರು, ತಮ್ಮ ವಿಚ್ಛೇದನ ಕುರಿತು ತಾವು ಹಾಜರಾಗಬೇಕಿರುವ ನ್ಯಾಯಾಲಯ ತಮ್ಮ ನಿವಾಸದಿಂದ 130 ಕಿಲೋಮೀಟರ್ ದೂರದಲ್ಲಿದೆ. ಹೀಗಾಗಿ ಪ್ರತಿ ಬಾರಿಯೂ ವಿಚಾರಣೆಗೆ ಹಾಜರಾಗಲು ಕಷ್ಟಕರವಾಗಿದೆ ಎಂದು ಮಹಿಳೆಯೊಬ್ಬರು ಸಲ್ಲಿಸಿದ್ದ ವರ್ಗಾವಣೆ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಆದಾಗ್ಯೂ, ಮಹಿಳೆ ಅನಾನುಕೂಲತೆಯನ್ನು ಎದುರಿಸುತ್ತಿದ್ದರೂ, ಈ ಪ್ರಕರಣದಲ್ಲಿ ಪ್ರತಿವಾದಿ ಆಕೆಯ ಪತಿ ಇಬ್ಬರು ಮಕ್ಕಳನ್ನು ನೋಡಿಕೊಳ್ಳುತ್ತಿರುವುದರಿಂದ ಈ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಿದರೆ, ಪತಿಗೆ ಇನ್ನಷ್ಟು ತೊಂದರೆ ಆಗುತ್ತೆ ಎಂದು ವಾದಿಸಿದ್ದು, ಇದನ್ನು ನ್ಯಾಯಾಲಯ ಪರಿಗಣಿಸಿದೆ.
ಸಾಂವಿಧಾನಿಕವಾಗಿ, ಮಹಿಳೆಗೆ ಪುರುಷನಂತೆಯೇ ಸಮಾನ ಹಕ್ಕುಗಳಿವೆ. ವಾಸ್ತವವಾಗಿ, ಹೆಚ್ಚಿನ ಸಂದರ್ಭಗಳಲ್ಲಿ ಮಹಿಳೆಯರು ಪ್ರಾಥಮಿಕ ಬಲಿಪಶುಗಳು. ಆದರೆ ಮಹಿಳೆಯರ ಕ್ರೌರ್ಯದಿಂದ ಪುರುಷರು ಪ್ರಭಾವಿತರಾಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
ಆದ್ದರಿಂದ, ಲಿಂಗ ಸಮಾನ ಸಮಾಜದ ಅವಶ್ಯಕತೆಯಿದೆ.ಆ ರೀತಿಯ ಸಮಾಜ ಲಿಂಗ ಅಥವಾ ಲಿಂಗದ ಆಧಾರದ ಮೇಲೆ ಕರ್ತವ್ಯಗಳನ್ನು ಬೇರ್ಪಡಿಸುವುದನ್ನು ತಡೆಯುವ ಗುರಿಯನ್ನು ಹೊಂದಿದೆ ಎಂದು ಹೈಕೋರ್ಟ್ ಹೇಳಿದೆ.




