Ad imageAd image

ಲಾರಿಗೆ ಕಾರು ನಡುವೆ ಭೀಕರ ಅಪಘಾತ : 10 ಮಂದಿ ಸಾವು,13 ಮಂದಿಗೆ ಗಂಭೀರ ಗಾಯ 

Bharath Vaibhav
ಲಾರಿಗೆ ಕಾರು ನಡುವೆ ಭೀಕರ ಅಪಘಾತ : 10 ಮಂದಿ ಸಾವು,13 ಮಂದಿಗೆ ಗಂಭೀರ ಗಾಯ 
WhatsApp Group Join Now
Telegram Group Join Now

ಉತ್ತರ ಕನ್ನಡ : ಹಣ್ಣು ಮತ್ತು ತರಕಾರಿ ಸಾಗಿಸುತ್ತಿದ್ದ ಲಾರಿಗೆ ಕಾರ್‌ ಡಿಕ್ಕಿಯಾಗಿ 10 ಮಂದಿ ಸಾವನ್ನಪ್ಪಿರುವ ಭೀಕರ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ 63 ರ ಗುಳ್ಳಾಪುರದ ಬಳಿ ಸಂಭವಿಸಿದೆ. ಘಟನೆಯಲ್ಲಿ 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಎಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಂಭವವಿದೆ. ಲಾರಿ ಚಾಲಕ ನಿದ್ದೆಗಣ್ಣಿನಲ್ಲಿ ಚಾಲನೆ ಮಾಡುತ್ತಿದ್ದ ಕಾರಣ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆಯೆನ್ನಲಾಗಿದೆ.

ಮೃತರೆಲ್ಲರೂ ಹಾವೇರಿ ಜಿಲ್ಲೆಯ ಸವಣೂರಿನವರಾಗಿದ್ದು, ಕುಮುಟೆಯಲ್ಲಿ ನಡೆಯುತ್ತಿದ್ದ ಸಂತೆ ಮಾರುಕಟ್ಟೆಗೆ 30 ಕ್ಕೂ ಹೆಚ್ಚು ಜನರನ್ನು ಹೊತ್ತು ಲಾರಿ ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ರಕ್ಷಣಾ ಪಡೆಗಳು, ಆಂಬುಲೆನ್ಸ್‌ ಹಾಗೂ ಪೊಲೀಸ್‌ ಸಿಬ್ಬಂದಿ ಧಾವಿಸಿದ್ದಾರೆ. ಮೃತರನ್ನು ಯೆಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಕರೆದೊಯ್ಯಲು ಸಿದ್ದತೆ ನಡೆಸಲಾಗುತ್ತಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!