Ad imageAd image

ರಾಜಕಾರಣದಲ್ಲಿ ಹೆದರಿದ್ದೇ ಆಗಿದಲ್ಲಿ ರಾಜಕೀಯದಲ್ಲಿ ಉಳಿಯೋಕೆ ಆಗುತ್ತಿರಲಿಲ್ಲ : ಸಿದ್ದರಾಮಯ್ಯ 

Bharath Vaibhav
WhatsApp Group Join Now
Telegram Group Join Now

ತುಮಕೂರು : 41 ವರ್ಷದಿಂದ ಮಂತ್ರಿ ಆಗಿದ್ದು, ಎರಡು ಬಾರಿ ಸಿಎಂ ಕೂಡ ಆಗಿದ್ದೇನೆ. ರಾಜಕಾರಣದಲ್ಲಿ ಹೆದರಿದ್ದೇ ಆಗಿದಲ್ಲಿ ನಾನು ರಾಜಕೀಯದಲ್ಲಿ ಉಳಿಯೋಕೆ ಆಗುತ್ತಿರಲಿಲ್ಲ ಎಂದು ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ಮಾತಲ್ಲೇ ಟಾಂಗ್ ನೀಡಿದರು.

ಜಿಲ್ಲೆಯಲ್ಲಿ ನಿರ್ಮಾಣಗೊಳ್ಳಲಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಶಂಕುಸ್ಥಾಪನೆ ಸಮಾರಂಭದಲ್ಲಿ ಸಿಎಂ ಮಾತನಾಡಿ, ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ನನ್ನ ವಿರುದ್ಧ ಪ್ರತಿಭಟನೆ ನಡೆಸಲು ಹಣದ ಆಮಿಷ ಒಡ್ಡಿರುವ ಸುದ್ದಿ ನೋಡಿದೆ.

ನಾನು 2 ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರಿದ್ದರೆ ರಾಜಕಾರಣದಲ್ಲಿ ಉಳಿಯೋಕೆ ಆಗ್ತಿರಲಿಲ್ಲ. ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದರು.

ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ತುಮಕೂರು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಕ್ರೀಡಾ ಪ್ರಗತಿಗೆ ಪೂರಕವಾಗಲಿದೆ.

ಆದಷ್ಟು ಶೀಘ್ರದಲ್ಲಿ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸುವಂತೆ ಸೂಚನೆ ನೀಡಿದ್ದೇನೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದೆ. ಮೈಸೂರಿನಲ್ಲೂ ಜಾಗ ಕೊಡುತ್ತೇವೆ ಎಂದು ಭರವಸೆ ನೀಡಿದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!