ಹೈದರಾಬಾದ್ : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಗರ್ಭಿಣಿ ಪತ್ನಿಯನ್ನು ಕೊಂದ ಪತಿ ದೇಹವನ್ನು ಕುಕ್ಕರ್ ನಲ್ಲಿ ಬೇಯಿಸಿದ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ.
35 ವರ್ಷದ ಮಹಿಳೆಯನ್ನು ಆಕೆಯ ಪತಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದ್ದು, ಆಕೆಯ ದೇಹವನ್ನು ಕತ್ತರಿಸಿ ಪ್ರೆಶರ್ ಕುಕ್ಕರ್ ನಲ್ಲಿ ಕುದಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಹೇಳಿಕೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ನಡೆಸಿದಾಗ ದೇಹದ ಭಾಗಗಳನ್ನು ಕುದಿಸಿ ನದಿಗೆ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ವಾರದ ಹಿಂದೆ ಮಹಿಳೆ ಕಾಣೆಯಾಗಿದ್ದು, ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.
ಶಂಕಿತ ಮಾಜಿ ಸೇನಾ ಸಿಬ್ಬಂದಿಯಾಗಿದ್ದು, ಪ್ರಸ್ತುತ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾನೆ.ಪತ್ನಿಯೊಂದಿಗೆ ವಾಗ್ವಾದ ನಡೆಸಿದ ನಂತರ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದ್ದು, ತನಿಖೆಯ ಸಮಯದಲ್ಲಿ ಸಂಪೂರ್ಣ ವಿವರಗಳು ಬೆಳಕಿಗೆ ಬರಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೈದರಾಬಾದ್ನ ರಾಚಕೊಂಡ ಕಮಿಷನರೇಟ್ನ ಮೀರ್ಪೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.




