Ad imageAd image

ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

Bharath Vaibhav
ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ
WhatsApp Group Join Now
Telegram Group Join Now

ಸಿರುಗುಪ್ಪ : ನಗರದ ಶ್ರೀ ನೀಲಕಂಠೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಯ ನೂತನ ನಿರ್ದೇಶಕರ ಮತ್ತು ಪದಾಧಿಕಾರಿಗಳ ಪದಗ್ರಹಣ ಹಾಗೂ ಅಭಿನಂದನಾ ಸಮಾರಂಭವನ್ನು ಶಾಸಕ ಬಿ.ಎಮ್.ನಾಗರಾಜ ಅವರು ಉದ್ಘಾಟಿಸಿದರು.

ನಂತರ ಮಾತನಾಡಿ ಸಂಘದಲ್ಲಿ ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಪದಾಧಿಕಾರಿಗಳಿಗೆ ಅಭಿನಂದಿಸಲಾಗುವುದು ಹಾಗೂ ನಿರ್ದೇಶಕರ ಮತ್ತು ಪದಾಧಿಕಾರಿಗಳ ಚುನಾವಣೆಯಲ್ಲಿ ಪರಾಜಿತಗೊಂಡ ಎಲ್ಲರೂ ಸಮಾನ ಮನಸ್ಕರಾಗಿ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸಬೇಕೆಂದರು.

ಸಂಘದ ಪದಾಧಿಕಾರಿಗಳಿಂದ ಹಲವು ವರ್ಷಗಳಿಂದ ಶಿಥಿಲಗೊಂಡಿರುವ ನೌಕರರ ಭವನದ ಕಟ್ಟಡದ ಮರು ನಿರ್ಮಾಣಕ್ಕೆ ಸಂಬಂದಿಸಿದ ಉಸ್ತುವಾರಿ ಮಂತ್ರಿಗಳಿಗೆ ಮನವರಿಕೆ ಮಾಡಿ ಕಲ್ಯಾಣ ಕರ್ನಾಟಕ ಅಥವಾ ಜಿಲ್ಲಾ ಖನಿಜ ನಿಧಿಯಲ್ಲಿ ಕನಿಷ್ಟ 2ಕೋಟಿ 50ಲಕ್ಷ ಅನುದಾನದಲ್ಲಿ ಸುಸಜ್ಜಿತ ಭವನವನ್ನು ನಿರ್ಮಾಣ ಮಾಡಿಸಿ ನೌಕರರ ಸಂಘದ ಕನಸು ನನಸಾಗಿಸಬೇಕೆಂದು ಮನವಿ ಸಲ್ಲಿಸಲಾಯಿತು.

ವಿವಿಧ ಇಲಾಖೆಗಳಿಂದ ಸಂಘಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಪದಾಧಿಕಾರಿಗಳಿಗೆ ಪದಗ್ರಹಣ ಪತ್ರವನ್ನು ವಿತರಿಸಲಾಯಿತು. ನಿರ್ದೇಶಕರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಇದೇ ವೇಳೆ ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ ವೆಂಕಟೇಶ್, ಗ್ರೇಡ್-2 ತಹಶೀಲ್ದಾರ್ ಸತ್ಯಮ್ಮ, ನಗರಸಭೆ ಸದಸ್ಯರಾದ ಹೆಚ್.ಗಣೇಶ, ಆರ್.ನಾಗರಾಜ, ರ‍್ನಾಟಕ ರಾಜ್ಯ ನೌಕರರ ಸಂಘದ ತಾಲೂಕಾಧ್ಯಕ್ಷ ಟಿ.ಹುಚ್ಚೀರಪ್ಪ,
ಇನ್ನಿತರ ಇಲಾಖೆವಾರು ಸಂಘಟನೆಗಳ ಪದಾಧಿಕಾರಿಗಳು ಇದ್ದರು.

ವರದಿ: ಶ್ರೀನಿವಾಸ ನಾಯ್ಕ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!