Ad imageAd image

ಫೈನಾನ್ಸ್ ಗಳ ಕಿರುಕುಳ : ಮಾನವೀಯತೆ ಮೆರೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 

Bharath Vaibhav
WhatsApp Group Join Now
Telegram Group Join Now

ಬೆಳಗಾವಿ: ಬಾಣಂತಿ ಸೇರಿದಂತೆ ಕುಟುಂಬದವರನ್ನೆಲ್ಲ ಹೊರ ಹಾಕಿ ಮನೆಗೆ ಬೀಗ ಹಾಕಲಾಗಿದ್ದ ಪ್ರಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತ್ವರಿತವಾಗಿ ಸ್ಪಂದಿಸಿದ್ದು, ಮನೆಯ ಬೀಗ ತೆರವುಗೊಳಿಸಿ ಕುಟುಂಬದವರನ್ನು ಮತ್ತೆ ಮನೆಗೆ ಸೇರಿಸಿದ್ದಾರೆ.

ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ಮಾಧುರಿ ಲೋಹಾರ್ ಎನ್ನುವ ಬಾಣಂತಿ ಮತ್ತು ಅವರ ಕುಟುಂಬದವರು ಸಾಲ ತೀರಿಸಿಲ್ಲ ಎಂದು ಆರೋಪಿಸಿ ಖಾಸಗಿ ಹಣಕಾಸು ಸಂಸ್ಥೆಯವರು ಹಸಿ ಬಾಣಂತಿ ಸೇರಿದಂತೆ ಕುಟುಂಬಸ್ಥರನ್ನು ಮನೆಯಿಂದ ಹೊರಹಾಕಿ ಸೀಜ್ ಮಾಡಿದ್ದರು.

ಈ ವಿಚಾರ ತಿಳಿದ ಸಚಿವೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ ತಮ್ಮ ಆಪ್ತ ಸಹಾಯಕರನ್ನು ಸ್ಥಳಕ್ಕೆ ಕಳಿಸಿ ಕುಟುಂಬಕ್ಕೆ ಆಹಾರ, ಧಾನ್ಯಗಳನ್ನು ಮತ್ತು ಸ್ವಲ್ಪಮಟ್ಟಿಗೆ ಆರ್ಥಿಕ ನೆರವನ್ನು ಒದಗಿಸಿದರು.

ನಂತರ ಹಣಕಾಸು ಸಂಸ್ಥೆಯ ಪ್ರತಿನಿಧಿಗಳ ಜೊತೆ ಮಾತನಾಡಿ, ಸಾಲ ಮರುಪಾವತಿಸಲು ಸಮಯಾವಕಾಶ ಕೊಡಿಸಿದ್ದಲ್ಲದೆ, ಮನೆಯ ಬೀಗ ತೆರವು ಮಾಡಿಸಿ ಕುಟುಂಬಸ್ಥರನ್ನು ಮನೆಯೊಳಗೆ ಸೇರಿಸಿದರು. ಕುಟುಂಬಸ್ಥರು ಕೇವಲ ಸಾಲದ ಅಸಲನ್ನಷ್ಟೆ ತುಂಬಲಿದ್ದು, ಅದಕ್ಕೂ ಕಾಲಾವಕಾಶ ನೀಡಬೇಕು ಎನ್ನುವ ತಾಕೀತು ಮಾಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡು ತಾವು ಆಸ್ಪತ್ರೆಯಲ್ಲಿದ್ದರೂ, ತುರ್ತಾಗಿ ಸ್ಪಂದಿಸಿ ಮಾನವೀಯತೆ ತೋರಿದ ಸಚಿವೆಗೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಧನ್ಯವಾದ ಸಲ್ಲಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!