ಚನ್ನಮ್ಮನ ಕಿತ್ತೂರು : ಕಿತ್ತೂರಿನ ಪ್ರಾಚ್ಯ ವಸ್ತು ಸಂಗ್ರಹಾಲಯದ ಆವರಣದಲ್ಲಿ ಮತದಾರರ ದಿನಾಚರಣೆ ಆಚರಣೆ ಆಚರಿಸಲಾಯಿತು. ಪ್ರಾಚ್ಯ ವಸ್ತು ಸಂಗ್ರಹಾಲಯದ ಸಹಾಯಕ ಕ್ಯೊರಟೋರ ರಾಘವೇಂದ್ರ ಅವರು ಮತದಾರರ ಪ್ರತಿಜ್ಞಾ ವಿಧಿ ಓದಿ ನಂತರ ಅವರು ಮಾತನಾಡಿ ಪ್ರತಿಯೊಬ್ಬರೂ ಮತ ಚಲಾಯಿಸುವ ಮೂಲಕ ದೇಶದ ಸಮಗ್ರ ಅಭಿವೃದ್ಧಿಗಾಗಿ ಅರ್ಹ ಪ್ರತಿನಿಧಿಯನ್ನು ಆಯ್ಕೆ ಮಾಡುವುದು ಕೂಡಾ ನಮ್ಮಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪ್ರಾಚ್ಯ ವಸ್ತು ಸಂಗ್ರಹಾಲಯದ ಎಲ್ಲ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.




