Ad imageAd image

ಕರ್ನಾಟಕದ ಒಟ್ಟು 9 ಸಾಧಕರಿಗೆ ಪದ್ಮ ಪ್ರಶಸ್ತಿ ಘೋಷಣೆ

Bharath Vaibhav
ಕರ್ನಾಟಕದ ಒಟ್ಟು 9 ಸಾಧಕರಿಗೆ ಪದ್ಮ ಪ್ರಶಸ್ತಿ ಘೋಷಣೆ
WhatsApp Group Join Now
Telegram Group Join Now

ನವದೆಹಲಿ: 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿಷ್ಠಿತ  ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಕರ್ನಾಟಕದ ಒಟ್ಟು 9 ಸಾಧಕರಿಗೆ ಪದ್ಮ ಪ್ರಶಸ್ತಿ ಘೋಷಿಸಲಾಗಿದೆ.

ಒಂದು ಪದ್ಮವಿಭೂಷಣ, ಎರಡು ಪದ್ಮಭೂಷಣ ಮತ್ತು ಆರು ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.ಹಿರಿಯ ನಟ ಅನಂತನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ. ಕಲಾವಿಭಾಗದಲ್ಲಿನ ಸಾಧನೆಗಾಗಿ ಅನಂತನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ.

ಅರಕಲಗೂಡು ಸೂರ್ಯಪ್ರಕಾಶ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ. ಪ್ರಸಾರ ಭಾರತೀಯ ಮಾಜಿ ಅಧ್ಯಕ್ಷರಾಗಿರುವ ಅರಕಲಗೂಡು ಸೂರ್ಯಪ್ರಕಾಶ್ ಸಾಹಿತ್ಯ, ಶಿಕ್ಷಣ, ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಸಾಧನೆಗಾಗಿ ಪ್ರಶಸ್ತಿ ನೀಡಲಾಗಿದೆ.

ಲಕ್ಷ್ಮಿ ನಾರಾಯಣ ಸುಬ್ರಮಣ್ಯಂ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ. ಕಲಾ ವಿಭಾಗದಲ್ಲಿನ ಸಾಧನೆಗಾಗಿ ಲಕ್ಷ್ಮೀನಾರಾಯಣ ಸುಬ್ರಹ್ಮಣ್ಯಂಗೆ ಪ್ರಶಸ್ತಿ ನೀಡಲಾಗಿದೆ. ಚಲನಚಿತ್ರ ನಿರ್ಮಾಪಕ ರಘು ಹಾಸನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ. ಪ್ರಶಾಂತ್ ಪ್ರಕಾಶ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ. ಅದೇ ರೀತಿ ಸಂಗೀತ ನಿರ್ದೇಶಕ ರಿಕಿ ಕೇಜ್ ಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ

ತಮಿಳುನಾಡು ನಟ ಅಜಿತ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ. ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಚಲನಚಿತ್ರ ನಿರ್ಮಾಪಕ ಶೇಖರ್ ಕಪೂರ್ ಗೆ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರಿಗೆ ಮರಣೋತ್ತರವಾಗಿ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!