Ad imageAd image

ಶ್ರೇಷ್ಟ ಸಂವಿಧಾನ ಫಲವಾಗಿ ಬಲಿಷ್ಟ ಭಾರತ ನಿರ್ಮಾಣ -ಶ್ರೀಸಿದ್ಧಗಂಗಾ ಮಠದಲ್ಲಿ ಧ್ವಜಾರೋಹಣಾ ನೆರವೇರಿಸಿದ ಸಚಿವ ಪರಮೇಶ್ವರ

Bharath Vaibhav
ಶ್ರೇಷ್ಟ ಸಂವಿಧಾನ ಫಲವಾಗಿ ಬಲಿಷ್ಟ ಭಾರತ ನಿರ್ಮಾಣ  -ಶ್ರೀಸಿದ್ಧಗಂಗಾ ಮಠದಲ್ಲಿ ಧ್ವಜಾರೋಹಣಾ ನೆರವೇರಿಸಿದ ಸಚಿವ ಪರಮೇಶ್ವರ
WhatsApp Group Join Now
Telegram Group Join Now

ತುಮಕೂರು, (ಜನವರಿ 26):- ಶ್ರೇಷ್ಟ ಸಂವಿಧಾನದ ಫಲವಾಗಿ ಭಾರತವು ವಿಶ್ವದಲ್ಲಿ 4ನೇ ಆರ್ಥಿಕ ದೇಶವಾಗಿ ಬೆಳೆದಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗೇಶ್ವರ ಸ್ವಾಮೀಜಿಯವರ ಆಶೀರ್ವಾದ ಪಡೆದು ಪ್ರಸಾದ ಸೇವಿಸಿದರು. ಬಳಿಕ ಮಠದ ಆವರಣದಲ್ಲಿ ಧ್ವಜಾರೋಹಣಾ ನೆರವೇರಿಸಿ ಅವರು ಮಾತನಾಡಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಬಲಿಷ್ಟವಾಗಿದ್ದು, ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಉತ್ತರ ನೀಡುತ್ತದೆ ಎಂದು ಹೇಳಿದರು.

 

76 ವರ್ಷಗಳಲ್ಲಿ ಭಾರತ ಅನೇಕ ಸಾಧನೆಗಳನ್ನು ಮಾಡಿದೆ. ಬಡತನ, ಹಸಿವು, ಅನಕ್ಷರತೆಯಿಂದ ಬಳಲುತ್ತಿದ್ದ ಅಂದಿನ ಭಾರತ, ಬಲಿಷ್ಟ ಭಾರತವಾಗಿ ಬೆಳೆದಿದೆ. ಪ್ರಪಂಚದಲ್ಲಿ 4ನೇ ಆರ್ಥಿಕತೆಯ ದೇಶವಾಗಿದೆ. ಇದರಲ್ಲಿ ಪ್ರತಿಯೊಬ್ಬ ಭಾರತೀಯನ ಶ್ರಮವಿದೆ. ಪ್ರತಿಯೊಬ್ಬರಿಗೂ ಸ್ವಾಭಿಮಾನದ ಬದುಕು ಸಿಗಲಿ ಎಂದು ಆಶಿಸಿದರು‌.

ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರು ಇಡೀ ದೇಶದಲ್ಲಿ ಯಾವುದೇ ಒಂದು ಧಾರ್ಮಿಕ ಸಂಸ್ಥೆ ನೀಡದಂತಹ ಅನನ್ಯ ಕೊಡುಗೆಯನ್ನು ನೀಡಿದ್ದಾರೆ. ಕೋಟ್ಯಂತರ ಬಡ ಮಕ್ಕಳಿಗೆ ಜಾತಿ, ಮತ, ಬೇದವಿಲ್ಲದೆ ಅನ್ನ, ಆಶ್ರಯ, ಅಕ್ಷರ ಕಲ್ಪಿಸಿದರು. ಪರಮಪೂಜ್ಯ ಶ್ರೀಗಳು ಹಾಕಿಕೊಟ್ಟ ದಾರಿಯಲ್ಲಿ ಇಂದಿನ ಶ್ರೀಗಳು ಸಾಗುತ್ತಿದ್ದಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಚಿವರಾದ ಪರಮೇಶ್ವರ ಅವರು ಮಠದ ವಿದ್ಯಾರ್ಥಿಗಳಿಗೆ ಸಂವಿಧಾನದ ಪೂರ್ವಪೀಠಿಕೆಯನ್ನು ಬೋಧಿಸಿದರು.

ಶ್ರೀ ಸಿದ್ಧಲಿಂಗೇಶ್ವರ ಸ್ವಾಮೀಜಿಯವರು ದಿವ್ಯಸಾನಿಧ್ಯ ವಹಿಸಿದರು. ಶಾಸಕರಾದ ಜ್ಯೋತಿಗಣೇಶ, ಸುರೇಶ್‌ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಅವರು ಉಪಸ್ಥಿತರಿದ್ದರು

 

ವರದಿ: ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!