ರಾಮನಗರ: ನಕಲಿ ಆದೇಶ ಪತ್ರ ಸೃಷ್ಟಿಸಿ ಗುತ್ತಿಗೆ ಆಧಾರದ ಮೇಲೆ ನರೇಗಾ ಎಂಜಿನಿಯರ್ ನೇಮಕ ಮಾಡಿಕೊಂಡಿರುವ ಘಟನೆ ರಾಮನಗರದಲ್ಲಿ ಬೆಳಕಿಗೆ ಬಂದಿದೆ.
ಜಿಲ್ಲಾ ಪಂಚಾಯತ್ ಎಫ್ ಡಿಎ ಸುಳ್ಳು ಆದೇಶ ಪತ್ರ ಸೃಷ್ಟಿಸಿ ಗುತ್ತಿಗೆ ಆಧಾರದ ಮೇಲೆ ನರೇಗಾ ಎಂಜಿಯರ್ ನೇಮಕ ಮಾಡಿಕೊಂಡಿದ್ದಾನೆ.
ರಾಮನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಎಂಬಾತ ಜಿಲ್ಲಾ ಪಂಚಾಯತ್ ಸಿಇಓ ದಿಗ್ವಿಜಯ್ ಬೋಡ್ಕೆ ಎಂಬುವವರ ಸಹಿ ನಕಲು ಮಾಡಿ ಮಧು ಎಂಬಾತನನ್ನು ಗುತ್ತಿಗೆ ಆಧಾರದ ಮೇಲೆ ನರೇಗಾ ಎಂಜಿನಿಯರ್ ಕೆಲಸಕ್ಕೆ ನೇಮಕ ಮಾಡಿಕೊಂಡು, ನಕಲಿ ಆದೇಶ ಪತ್ರವನ್ನು ಹೊರಡಿಸಿದ್ದಾನೆ.
ಕಳೆದ ಮೂರು ತಿಂಗಳಿಂದ ಮಧು ನರೇಗಾ ಎಂಜಿನಿಯರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ನೇಮಕಾತಿ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದ್ದಂತೆ ಪರಿಶೀಲನೆ ನಡೆಸಿದಾಗ ನಕಲಿ ಆದೇಶ ಪತ್ರದ ಮೂಲಕ ನೇಮಕಾತಿಯಾಗಿರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ರಾಮನಗರ ಟೌನ್ ಠಾಣೆಯಲ್ಲಿ ಎಫ್ ಡಿಎ ಅಭಿಷೇಕ್ ಹಾಗೂ ಮಧು ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಅಭಿಷೇಕ್ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.