ಬೆಂಗಳೂರು: ಬೆಳಗಾವಿ ಕರ್ನಾಟಕದ ಭಾಗವಾಗಿದೆ ಮತ್ತು ಅದು ಹಾಗೆಯೇ ಮುಂದುವರೆಯುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಗಡಿವಿವಾದದ ಕುರಿತು ಸಂಜಯ್ ರಾವತ್ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಬೆಳಗಾವಿಯು ಕರ್ನಾಟಕದ ಒಂದು ಭಾಗವಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದಲ್ಲೂ ಒಪ್ಪಿಗೆ ನೀಡಿದೆ. ಹೀಗಾಗಿ ಬೆಳಗಾವಿ ಕರ್ನಾಟಕದ ಭಾಗವಾಗಿಯೇ ಮುಂದುವರಿಯುತ್ತದೆ ಎಂದು ಹೇಳಿದರು.
ನಾನು ಪಂಚಮಸಾಲಿ ಪ್ರತಿಭಟನಾ ಸ್ಥಳಕ್ಕೆ ಅವರನ್ನು ಭೇಟಿ ಮಾಡಿ ಮಾತನಾಡಲು ಹೋಗುತ್ತಿದ್ದೇನೆ. ಈ ಬಗ್ಗೆ ನಂತರ ಮಾತನಾಡುತ್ತೇನೆ ಎಂದು ತಿಳಿಸಿದರು.
ರಾವತ್ ಹೇಳಿದ್ದೇನು?
ಮಹಾರಾಷ್ಟ್ರದಲ್ಲಿ ಏಕನಾಥ ಶಿಂಧೆ ಸಚಿವರಾಗಿದ್ದಾಗ ಮತ್ತು ಚಂದ್ರಕಾಂತ ಪಾಟೀಲ ಅವರು ಸಚಿವರಾಗಿದ್ದಾಗ ಗಡಿ ಭಾಗದ ವಿಶೇಷ ಉಸ್ತುವಾರಿಯನ್ನು ಹೊಂದಿದ್ದರು. ಅಲ್ಲಿಗೆ ಹೋದರೆ ಪೊಲೀಸರು ಬಂಧಿಸುತ್ತಾರೆ. ಅಷ್ಟೇ ಅಲ್ಲದೆ, ಪೊಲೀಸರ ಲಾಠಿ ಏಟು ತಿನ್ನಬೇಕಾಗುತ್ತದೆ. ಹಾಗಾಗಿ ಅವರು ಅಲ್ಲಿಗೆ ಹೋಗಲಿಲ್ಲ. ಬಂಧನ ಭೀತಿಯಿಂದ ಅಲ್ಲಿಗೆ ಹೋಗಿಲ್ಲ ಎಂದು ಕಿಡಿಕಾರಿದ್ದರು.