ನವದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
2013 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಮಾಸ್ಟರ್ ಬ್ಲಾಸ್ಟರ್ ತಮ್ಮ ವೃತ್ತಿ ಬದುಕಿನಲ್ಲಿ ಮುರಿಯಲಾಗದಂತಹ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ.ಈ ಹಿನ್ನಲೆ ತೆಂಡೂಲ್ಕರ್ ಅವರಿಗೆ 2024ರ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗಿದೆ.
ಟೀಂ ಇಂಡಿಯಾ ಪರ 200 ಟೆಸ್ಟ್ ಮತ್ತು 463 ಏಕದಿನ ಪಂದ್ಯಗಳಲ್ಲಿ ಆಡಿರುವ 51 ವರ್ಷದ ಸಚಿನ್, ನವೆಂಬರ್ 2013 ರಲ್ಲಿ 34,357 ಅಂತರರಾಷ್ಟ್ರೀಯ ರನ್ ಮತ್ತು 100 ಅಂತಾರಾಷ್ಟ್ರೀಯ ಶತಕಗಳೊಂದಿಗೆ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದರು.
ಇದೀಗ ಮುಂಬೈನಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದಿರುವ ಕಾರ್ಯಕ್ರಮದಲ್ಲಿ ಸಚಿನ್ ತೆಂಡೂಲ್ಕರ್ ಅವರಿಗೆ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗಿದೆ. ಈ ಹಿಂದಿನ ವರ್ಷ ರವಿಶಾಸ್ತ್ರಿ ಮತ್ತು ಮಾಜಿ ಅನುಭವಿ ವಿಕೆಟ್‌ಕೀಪರ್ ಫಾರೂಕ್ ಇಂಜಿನಿಯರ್ ಕರ್ನಲ್ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.