Ad imageAd image

ಸತೀಶ್ ಜಾರಕಿಹೊಳಿ ವಿರುದ್ಧ ಮಾನನಷ್ಟ ಪ್ರಕರಣ ರದ್ದು

Bharath Vaibhav
ಸತೀಶ್ ಜಾರಕಿಹೊಳಿ ವಿರುದ್ಧ ಮಾನನಷ್ಟ ಪ್ರಕರಣ ರದ್ದು
satish jarkiholi
WhatsApp Group Join Now
Telegram Group Join Now

ಬೆಂಗಳೂರು : ‘ಹಿಂದೂ ಎನ್ನುವುದು ಭಾರತೀಯ ಪದವಲ್ಲ. ಅದು ಪರ್ಷಿಯನ್‌ ನೆಲಕ್ಕೆ ಸೇರಿದ್ದು, ಅದೊಂದು ಅಶ್ಲೀಲ ಪದ’ ಎಂದು ಕಾರ್ಯಕ್ರಮವೊಂದರಲ್ಲಿ ಸಚಿವ ಸತೀಶ್​ ಜಾರಕಿಹೊಳಿ ಅವರು ನೀಡಿದ್ದ ಹೇಳಿಕೆ ಆರೋಪದಡಿ ಅವರ ವಿರುದ್ಧ ದಾಖಲಾಗಿದ್ದ ಮಾನನಷ್ಟ ಪ್ರಕರಣವನ್ನು ಹೈಕೋರ್ಟ್‌ ಇಂದು ರದ್ದುಗೊಳಿಸಿದೆ.

ಸತೀಶ್‌ ಜಾರಕಿಹೊಳಿ ಅವರ ಅರ್ಜಿಯ ವಿಚಾರಣೆಯನ್ನು ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಪುರಸ್ಕರಿಸಿವೆ. ಐಪಿಸಿ ಸೆಕ್ಷನ್‌ 53 (ಗಲಭೆಗೆ ಪ್ರಚೋದನೆ) ಮತ್ತು 500ರ ಬೇರೊಬ್ಬರಿಗೆ ಅವಮಾನ ಮಾಡುವುದು ಅಡಿ ಸ್ಪೆಷಲ್​​ ಮ್ಯಾಜಿಸ್ಟ್ರೇಟ್‌ ಕೋರ್ಟ್​​​​​ ಸಂಜ್ಞೇ ತೆಗೆದುಕೊಂಡು ಕಾನೂನಿನ ಅನ್ವಯ ಮುನ್ನಡೆಯಬೇಕು ಎಂದು ನೀಡಿದ್ದ ಆದೇಶವನ್ನು ಸತೀಶ್‌ ಅವರ ವಕೀಲರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಹಿಂದೂ ಎನ್ನುವುದು ಭಾರತೀಯ ಪದವಲ್ಲ ಸತೀಶ್​​​ ಅವರ ಅಭಿಪ್ರಾಯದ ವಿರುದ್ಧ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ವಕೀಲ ದಿಲೀಪ್‌ ಕುಮಾರ್‌ ಅವರು ಖಾಸಗಿ ದೂರನ್ನು ದಾಖಲಸಿದ್ದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!