Ad imageAd image

ಅಂಗನವಾಡಿ ಕೇಂದ್ರಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿವೆ:ಶಾಸಕ ಬಸನಗೌಡ ದದ್ದಲ್

Bharath Vaibhav
ಅಂಗನವಾಡಿ ಕೇಂದ್ರಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿವೆ:ಶಾಸಕ ಬಸನಗೌಡ ದದ್ದಲ್
WhatsApp Group Join Now
Telegram Group Join Now

ರಾಯಚೂರು :ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಯರಗೆರೆ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಯಚೂರು ಶಿಶು ಅಭಿವೃದ್ಧಿ ಯೋಜನೆ ಗಿಲ್ಲೆಸೂಗೂರು ಹಾಗೂ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಜಿಲ್ಲಾ ಸಂಸ್ಥೆ ರಾಯಚೂರು ಇವರ ಸಂಯುಕ್ತ ಆಶ್ರಯದಲ್ಲಿ ಗುಂಜಳ್ಳಿ ವಲಯದ ಬಾಲ ಮೇಳ ಕಾರ್ಯಕ್ರಮವನ್ನು ಮಾನ್ಯ ಶಾಸಕರು ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ಹಾಗೂ ಅಧ್ಯಕ್ಷರು ಕರ್ನಾಟಕ ಮಹರ್ಷಿ ವಾಲ್ಮೀಕಿ ಪಂಗಡಗಳ ಅಭಿವೃದ್ಧಿ ನಿಗಮ ಬೆಂಗಳೂರುರವರು ಉದ್ಘಾಟನೆ ಮಾಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಅಂಗನವಾಡಿ ಕೇಂದ್ರಗಳಲ್ಲಿ ಉತ್ತಮ ಗುಣಮಟ್ಟದ ಶಾಲಾ ಪೂರ್ವ ಶಿಕ್ಷಣವನ್ನು ಮಕ್ಕಳಿಗೆ ನೀಡುವುದರ ಮೂಲಕ ಖಾಸಗಿ ಶಾಲೆಗಳಿಗೆ ಪೈಪೋಟಿಯನ್ನು ಕೊಡುತ್ತಿವೆ ಅಂಗನವಾಡಿ ಕೇಂದ್ರಗಳು ಖಾಸಿಗೆ ಶಾಲೆಗಳಿಗಿಂತ ಸದೃಢವಾಗಿವೆ ಮತ್ತು ಮಕ್ಕಳಿಗೆ ಭದ್ರ ಬುನಾದಿಯಾಗಿವೆ ಅಂಗನವಾಡಿ ಕೇಂದ್ರದಲ್ಲಿ ವಿದ್ಯಾಭ್ಯಾಸ ಮಾಡಿರುವ ಮಕ್ಕಳು ಮುಂದಿನ ದಿನಗಳಲ್ಲಿ ಉನ್ನತ ವ್ಯಕ್ತಿಗಳಾಗಿ ದೊಡ್ಡ ಹುದ್ದೆಗಳನ್ನು ಹೊಂದಿ ಅಧಿಕಾರಿಗಳಾಗುತ್ತಾರೆ ಎಂದು ತಿಳಿಸಿದರು.

ಈ ಬಾಲ ಮೇಳ ಕಾರ್ಯಕ್ರಮವನ್ನು ಆಯೋಜಿಸಿರುವ ಕಾರ್ಯಕ್ರಮವನ್ನು ಮಾಡಿರುವುದಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ಗ್ರಾಮ ಪಂಚಾಯತ್ ಅಧ್ಯಕ್ಷರು. ಜಿಲ್ಲಾ ನಿರೂಪಣಾಧಿಕಾರಿಗಳು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಯಚೂರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು.ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷರು.ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು.ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು. ರಾಯಚೂರು ನಗರ ಮತ್ತು ಹೋಬಳಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು. ಅಜೀಂ ಫೌಂಡೇಶನ್ ಸಂಸ್ಥೆಯ ಅಧಿಕಾರಿಗಳು. ರಾಯಚೂರು ನಗರ ಶಿಶು ಅಭಿವೃದ್ಧಿ ಯೋಜನೆಯ ಕಿರಿಯ ಮೇಲ್ವಿಚಾರಕರು. ಗಿಲ್ಲೆಸೂಗೂರು ಯೋಜನೆಯ ಮೇಲ್ವಿಚಾರಕರು. ಅಂಗನವಾಡಿ ಕಾರ್ಯಕರ್ತೆಯರು. ಮಕ್ಕಳ ಪೋಷಕರು ಗ್ರಾಮಸ್ಥರು ರಾಜಕೀಯ ಮುಖಂಡರು ಉಪಸ್ಥಿತರಿದ್ದರು.

ವರದಿ: ಗಾರಲದಿನ್ನಿ ವೀರನಗೌಡ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!