ಬಾಗಲಕೋಟೆ : ಬಾಗಲಕೋಟೆಯಲ್ಲಿ ಬ್ಯಾಂಕ್ ಕಳ್ಳತನಕ್ಕೆ ಯತ್ನಿಸಿ ಕಳ್ಳರು ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯ ರಾಂಪುರ ಪೊಲೀಸ್ ಠಾಣೆಯಲ್ಲಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಬಾಗಲಕೋಟೆಯಲ್ಲಿ ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ಗ್ಯಾಸ್ ಕಟರ್ ಬಳಸಿ ಗ್ರಾಮೀಣ ಬ್ಯಾಂಕ್ ನಲ್ಲಿ ಖದಿಮರು ದರೋಡೆಗೆ ಯತ್ನಿಸಿದ್ದಾರೆ. ರಾಂಪುರ ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ ಈ ಒಂದು ಕಳ್ಳತನಕ್ಕೆ ಯತ್ನಿಸಲಾಗಿದೆ.
ಈ ಕುರಿತಂತೆ 8 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಈಗಾಗಲೇ ಮೊದಲ ಬಾರಿ ಬ್ಯಾಂಕ್ ಕಳ್ಳತನಕ್ಕೆ ಯತ್ನಿಸಿದ್ದು, ಎರಡನೇ ಬಾರಿ ಬ್ಯಾಂಕ್ ಕಳ್ಳತನ ಮಾಡುವ ಸಂದರ್ಭದಲ್ಲಿ ಈ ಮೂವರು ಕಳ್ಳರು ಸಿಕ್ಕಿ ಬಿದ್ದಿದ್ದಾರೆ.