ಬೆಂಗಳೂರು : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಸರ್ಕಾರದ ಬೊಕ್ಕಸ ಬರಿದಾಗಿದೆ ಎಂದಿರುವ ಬಿಜೆಪಿ, ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲೂ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಕುಟುಕಿದೆ.
ಈ ಕುರಿತು ಬಿಜೆಪಿ ಟ್ವೀಟಿಸಿದ್ದು, ಸರ್ಕಾರದ ಬೊಕ್ಕಸ ಖಾಲಿ ಆಗಿರುವ ಕಾರಣ ರಾಜ್ಯದ ಜನರನ್ನು ಕಾಂಗ್ರೆಸ್ ಸರ್ಕಾರ “ನಮ್ಮ ತೆರಿಗೆ ನಮ್ಮ ಹಕ್ಕು” ಎಂಬ ವಿಚಾರದಲ್ಲಿ ವ್ಯವಸ್ಥಿತವಾಗಿ ಎತ್ತಿಕಟ್ಟುತ್ತಿದೆ.
ಸರ್ಕಾರ ಸಂಪೂರ್ಣ ದಿವಾಳಿಯಾಗಿರುವುದರಿಂದ ತೆರಿಗೆ ಹಣದಲ್ಲಾದರೂ ಉಸಿರಾಡುತ್ತೇವೆ ಎಂಬ ಉದ್ದೇಶವನ್ನು ಇಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಮಸಲತ್ತು ನಡೆಸುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಎಲ್ಲಾ ದಿನೋಪಯೋಗಿ ವಸ್ತುಗಳ ಮೇಲೆ ತೆರಿಗೆ ಹೆಚ್ಚಳ ಮಾಡಿ , ಜನಸಾಮಾನ್ಯರ ರಕ್ತ ಹೀರುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಜನ ಈಗಾಗಲೇ ಧ್ವನಿ ಎತ್ತುತ್ತಿದ್ದಾರೆ. ಗ್ಯಾರಂಟಿ ಸರ್ಕಾರದಿಂದ ಬೆಲೆ ಏರಿಕೆ ಗ್ಯಾರಂಟಿ ಎಂಬಂತಾಗಿದೆ ಎಂದು ಕಮಲಪಡೆ ಟೀಕಿಸಿದೆ.




