ಗೋವಾ : ರಜನಿಕಾಂತ್ ಅಭಿನಯದ ಕಬಾಲಿ ಚಿತ್ರದ ನಿರ್ಮಾಪಕ ಸುಂಕರ ಕೃಷ್ಣ ಪ್ರಸಾದ್ ಚೌಧರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಗೋವಾದ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಕೆ.ಪಿ. ಚೌಧರಿ ಎಂದೇ ಖ್ಯಾತಿ ಪಡೆದಿದ್ದ ಅವರು ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದರು.ಅಲ್ಲದೇ ಅಷ್ಟೇ ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರು, ಇದೀಗ ಮನೆಯೊಂದರಲ್ಲಿ ಅನುಮಾನಾಸ್ಪದವಾಗಿ ಚೌಧರಿ ಸಾವನ್ನಪ್ಪಿದ್ದಾರೆ.
2023ರಲ್ಲಿ ಮಾದಕ ವಸ್ತು ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಕೆ.ಪಿ ಚೌಧರಿಯನ್ನು ಬಂಧಿಸಲಾಗಿತ್ತು, ಇದಾಗ ಬಳಿಕ ಜಾಮೀನಿನ ಮೇಲೆ ಆಚೆ ಬಂದಿದ್ದರು, ಘಟನೆಯ ಬಳಿಕ ಚೌಧರಿಯವರು ಸಾಕಷ್ಟು ಕುಗ್ಗಿ ಹೋಗಿದ್ದರು,ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಕಾರಣ ಏನು ಎಂಬುದು ತನಿಖೆ ಬಳಿಕ ಹೊರಬರಬೇಕಿದೆ.




