ನವದೆಹಲಿ: ವಿಶ್ವವಿಖ್ಯಾತ ತಬಲಾ ವಾದಕ ಉಸ್ತಾದ್ ಝಾಕಿರ್ ಹುಸೇನ್ ಆರೋಗ್ಯ ಸಮಸ್ಯೆಯಿಂದಾಗಿ ಭಾನುವಾರ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಸೇನ್ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಕುಟುಂಬ ಸ್ಪಷ್ಟಪಡಿಸಿದೆ.
ಝಾಕೀರ್ ಹುಸೇನ್ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಗಣ್ಯಾತಿಗಣ್ಯರೆಲ್ಲ ಸಂತಾಪ ಸೂಚಿಸಿದ್ದರು.ಅಭಿಮಾನಿಗಳು, ಸಂಗೀತಾಸಕ್ತರು ಕಂಬನಿ ಮಿಡಿದಿದ್ದರು. ಅವರ ಕುಟುಂಬದಿಂದ ಸ್ಪಷ್ಟನೆ ನೀಡಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.
ಉಸ್ತಾದ್ ಝಾಕಿರ್ ಹುಸೇನ್ ಅವರು ತೀವ್ರ ಆರೋಗ್ಯ ಸಮಸ್ಯೆಗಳಿಂದಾಗಿ ಪ್ರಸ್ತುತ ಯುಎಸ್‌ಎಯ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಝಾಕಿರ್ ಹುಸೇನ್ ಆಸ್ಪತ್ರೆಗೆ ದಾಖಲಾದ ಸುದ್ದಿಯನ್ನು ಅವರ ಸೋದರ ಮಾವ ಖಚಿತಪಡಿಸಿದ್ದಾರೆ.